IPL ಟೂರ್ನಿಯ ಪ್ಲೇ ಆಫ್ ಹಾಗೂ ಫೈನಲ್ ಪಂದ್ಯದ ವೇಳಾಪಟ್ಟಿ ಬಿಡುಗಡೆ ಮಾಡಲು ಬಿಸಿಸಿಐ ಮುಂದಾಗಿದೆ. ಪ್ಲೇ ಆಫ್ ಹಾಗೂ ಫೈನಲ್ ಪಂದ್ಯ ಆಯೋಜಿಸಲು ಕ್ರೀಡಾಂಗಣವನ್ನು ಆಯ್ಕೆ ಮಾಡಲಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಇಲ್ಲಿದೆ. 

ಮುಂಬೈ(ಏ.05): 12ನೇ ಐಪಿಎಲ್ ಟೂರ್ನಿ 2ನೇ ವಾರಕ್ಕೆ ಕಾಲಿಟ್ಟಿದೆ. 8 ತಂಡಗಳು ಪ್ರಶಸ್ತಿಗಾಗಿ ಹೋರಾಟ ನಡೆಸುತ್ತಿದೆ. ಲೀಗ್ ಹಂತದ ವೇಳಾಪಟ್ಟಿ ಬಿಡುಗಡೆ ಮಾಡಿರುವ ಬಿಸಿಸಿಐ ಇದೀಗ ಪ್ಲೇ ಆಫ್ ಹಾಗೂ ಫೈನಲ್ ಪಂದ್ಯದ ವೇಳಾಪಟ್ಟಿ ಬಿಡುಗಡೆ ಮಾಡಲಿದೆ. ಬಿಸಿಸಿಐ ಮೂಲಗಳ ಪ್ರಕಾರ ಐಪಿಎಲ್ ಫೈನಲ್ ಪಂದ್ಯಕ್ಕೆ ಚೆನ್ನೈ ಆತಿಥ್ಯ ವಹಿಸಿದ್ದರೆ, ಪ್ಲೇ ಆಫ್ ಪಂದ್ಯಗಳು ಚೆನ್ನೈ ಹಾಗೂ ಹೈದರಾಬಾದ್‌ನಲ್ಲಿ ನಡೆಯಲಿದೆ.

ಇದನ್ನೂ ಓದಿ: IPL 2019: ಇಲ್ಲಿದೆ KKR ವಿರುದ್ಧದ ಪಂದ್ಯಕ್ಕೆ RCB ಸಂಭವನೀಯ ತಂಡ!

ಮೇ 7 ರಂದು ಮೊದಲ ಪ್ಲೇ ಆಫ್ ಪಂದ್ಯ ಆಯೋಜನೆಗೊಳ್ಳಲಿದೆ. ಇನ್ನು ಮೇ 8 ರಂದು ಎಲಿಮಿನೇಟರ್ ಪಂದ್ಯ, ಮೇ. 10ಕ್ಕೆ 2ನೇ ಪ್ಲೇ ಆಫ್ ಹಾಗೂ ಮೇ.12ಕ್ಕೆ ಫೈನಲ್ ಪಂದ್ಯ ನಡೆಯಲಿದೆ ಎಂದು ಬಿಸಿಸಿಐ ಮೂಲಗಳು ಹೇಳಿವೆ. ಶೀಘ್ರದಲ್ಲೇ ಬಿಸಿಸಿಐ ಅಧಿಕೃತ ವೇಳಾಪಟ್ಟಿ ಬಿಡುಗಡೆ ಮಾಡಲಿದೆ.

ಇದನ್ನೂ ಓದಿ: 12 ಗಂಟೆಗಳಲ್ಲಿ 2 ಪಂದ್ಯಗಳನ್ನು ಆಡಿದ ಲಸಿತ್‌ ಮಾಲಿಂಗ!

ವಿಶಾಖಪಟ್ಟಣಂ ಕ್ರೀಡಾಂಗಣವನ್ನು ಸ್ಟಾಂಡ್ ಬೈ ಆಗಿ ಆಯ್ಕೆ ಮಾಡಲಾಗಿದೆ. ಅಂತಿಮ ಕ್ಷಣದಲ್ಲಿ ಬದಲಾವಣೆಗಳಾದಲ್ಲಿ ಪ್ಲೇ ಆಫ್ ಪಂದ್ಯಗಳು ವಿಶಾಖಪಟ್ಟಣಂಕ್ಕೆ ಸ್ಥಳಾತಂರಗೊಳಿಸಲು ಆಲೋಚನೆಯಲ್ಲಿದೆ. 12ನೇ ಆವೃತ್ತಿ ಐಪಿಎಲ್ ಟೂರ್ನಿಯ ಉದ್ಘಾಟನಾ ಪಂದ್ಯ ಕೂಡ ಚೆನ್ನೈನಲ್ಲಿ ಆಯೋಜಿಸಲಾಗಿತ್ತು. ಇದೀಗ ಫೈನಲ್ ಪಂದ್ಯ ಕೂಡ ಚೆನ್ನೈನಲ್ಲಿ ಆಯೋಜಿಸಲು ಬಿಸಿಸಿಐ ಮುಂದಾಗಿದೆ.