ಸುರೇಶ್ ರೈನಾ[61*] ಅಜೇಯ ಅರ್ಧಶತಕದ ನೆರವಿನಿಂದ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಚೆನ್ನೈ ಸೂಪರ್’ಕಿಂಗ್ಸ್ 5 ಭರ್ಜರಿ ಜಯ ಸಾಧಿಸಿದೆ. ಚೆನ್ನೈನ ಈ ಗೆಲುವಿನೊಂದಿಗೆ ಪಂಜಾಬ್ ಪ್ಲೇ ಆಫ್ ಕನಸು ಭಗ್ನವಾದಂತಾಗಿದೆ.

ಪುಣೆ[ಮೇ.20]: ಪ್ರೀತಿ ಹುಡುಗರ ಪ್ಲೇ ಆಫ್ ಪ್ರವೇಶಿಸುವ ಕನಸಿಗೆ ಚೆನ್ನೈ ಸೂಪರ್ ಕಿಂಗ್ಸ್ ನೀರೆರೆಚಿದೆ. ಟೂರ್ನಿ ಆರಂಭದಲ್ಲಿ ಅದ್ಭುತ ಪ್ರದರ್ಶನ ತೋರಿದ್ದ ಕಿಂಗ್ಸ್ ಇಲೆವನ್ ಪಂಜಾಬ್ ಕೊನೆಯಲ್ಲಿ ಸತತ 5 ಸೋಲು ಕಾಣುವ ಮೂಲಕ ತನ್ನ ಅಭಿಯಾನ ಅಂತ್ಯಗೊಳಿಸಿದೆ. ಈ ಪಂದ್ಯದೊಂದಿಗೆ ಲೀಗ್ ಹಂತದ ಪಂದ್ಯಗಳು ಮುಕ್ತಾಯವಾಗಿದ್ದು, ಸನ್’ರೈಸರ್ಸ್ ಹೈದರಾಬಾದ್, ಚೆನ್ನೈ ಸೂಪರ್’ಕಿಂಗ್ಸ್, ಕೋಲ್ಕತಾ ನೈಟ್’ರೈಡರ್ಸ್ ಹಾಗೂ ರಾಜಸ್ಥಾನ ರಾಯಲ್ಸ್ ತಂಡಗಳು ಪ್ಲೇ ಆಫ್ ಹಂತ ಪ್ರವೇಶಿಸಿವೆ.

ಸುರೇಶ್ ರೈನಾ[61*] ಅಜೇಯ ಅರ್ಧಶತಕದ ನೆರವಿನಿಂದ ಕಿಂಗ್ಸ್ ಇಲೆವನ್ ಪಂಜಾಬ್ ವಿರುದ್ಧ ಚೆನ್ನೈ ಸೂಪರ್’ಕಿಂಗ್ಸ್ 5 ಭರ್ಜರಿ ಜಯ ಸಾಧಿಸಿದೆ. ಚೆನ್ನೈನ ಈ ಗೆಲುವಿನೊಂದಿಗೆ ಪಂಜಾಬ್ ಪ್ಲೇ ಆಫ್ ಕನಸು ಭಗ್ನವಾದಂತಾಗಿದೆ.

ಪಂಜಾಬ್ ನಿಡಿದ್ದ 154 ರನ್’ಗಳ ಸವಾಲಿನ ಗುರಿ ಬೆನ್ನತ್ತಿದ ಚೆನ್ನೈ 27 ರನ್’ಗಳಾಗುವಷ್ಟರಲ್ಲಿ ಮೂರು ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ಆ ಬಳಿಕ ಎಚ್ಚರಿಕೆಯ ಆಟವಾಡಿದ ಧೋನಿ ಪಡೆ ಇನ್ನೂ 5 ಎಸೆತಗಳು ಬಾಕಿ ಇರುವಂತೆಯೇ ಗೆಲುವಿನ ನಗೆ ಬೀರಿತು. ಸಿಎಸ್’ಕೆ ಪರ ರೈನಾ ಅಜೇಯ 61 ರನ್ ಬಾರಿಸಿದರೆ, ದೀಪಕ್ ಚಾಹರ್ 31 ಹಾಗೂ ಹರ್ಭಜನ್ ಸಿಂಗ್ 19 ರನ್ ಬಾರಿಸಿ ತಂಡದ ಗೆಲುವನ್ನು ಸುಗಮಗೊಳಿಸಿದರು.
ಪಂಜಾಬ್ ಪರ ಅಂಕಿತ್ ರಜಪೂತ್ ಹಾಗೂ ಅಶ್ವಿನ್ 2 ವಿಕೆಟ್ ಕಿತ್ತರೆ, ಮೋಹಿತ್ ಶರ್ಮಾ 1 ವಿಕೆಟ್ ಕಬಳಿಸಿದರು.

ಇದಕ್ಕೂ ಮೊದಲು ಕರುಣ್ ನಾಯರ್ ಅರ್ಧಶತಕದ ನೆರವಿನಿಂದ ಕಿಂಗ್ಸ್ ಇಲೆವನ್ ಪಂಜಾಬ್ 153 ರನ್ ಕಲೆಹಾಕಿತ್ತು.

ಸಂಕ್ಷಿಪ್ತ ಸ್ಕೋರ್:
KXIP: 153/10
ಕರುಣ್ ನಾಯರ್: 54
ಎನ್ಜಿಡಿ: 10/4
CSK: 159/5
ಸುರೇಶ್ ರೈನಾ: 61*
ಅಂಕಿತ್ : 19/2