ಚೇತೇಶ್ವರ್ ಪೂಜಾರ ಡ್ರಾಪ್- ಆಕ್ರೋಶ ವ್ಯಕ್ತಪಡಿಸಿದ ಫ್ಯಾನ್ಸ್!

https://static.asianetnews.com/images/authors/2c1b126a-9adf-5f82-ae4f-e781463685fe.jpg
First Published 1, Aug 2018, 5:26 PM IST
Cheteshwar Pujara misses out from the Edgbaston Test fans got angry
Highlights

ಇಂಗ್ಲೆಂಡ್ ವಿರುದ್ಧದ ಮೊದಲ ಟೆಸ್ಟ್ ಪಂದ್ಯಕ್ಕೆ ಟೀಂ ಇಂಡಿಯಾ ಆಯ್ಕೆ ಮಾಡಿದ ತಂಡಕ್ಕೆ ಅಭಿಮಾನಿಗಳು ಅಸಮಧಾನ ವ್ಯಕ್ತಪಡಿಸಿದ್ದಾರೆ. ಅಷ್ಟಕ್ಕೂ ನಾಯಕ ಕೊಹ್ಲಿ ಆಯ್ಕೆ ಮಾಡಿದ ತಂಡಕ್ಕೆ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದು ಯಾಕೆ? ಇಲ್ಲಿದೆ ವಿವರ.

ಎಡ್ಜ್‌ಬಾಸ್ಟನ್(ಆ.01): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಟೆಸ್ಟ್ ಪಂದ್ಯ ಆರಂಭಗೊಂಡಿದೆ. ಆದರೆ ಟೀಂ ಇಂಡಿಯಾ ಆಡೋ ಹನ್ನೊಂದರ ಬಳಗ ಇದೀಗ ಚರ್ಚಗೆ ಗ್ರಾಸವಾಗಿದೆ.  ಚೇತೇಶ್ವರ್ ಪೂಜಾರಗೆ ಸ್ಥಾನ ನೀಡದ ನಾಯಕ ವಿರಾಟ್ ಕೊಹ್ಲಿ ವಿರುದ್ದ ಅಭಿಮಾನಿಗಳು ಆಕ್ರೋಶ ವ್ಯಕ್ತಪಡಿಸಿದ್ದಾರೆ. 

ಮೊದಲ ಟೆಸ್ಟ್ ಪಂದ್ಯಕ್ಕೆ ಕಳೆಪೆ ಫಾರ್ಮ್‌ನಲ್ಲಿರುವ ಶಿಖರ್ ಧವನ್‌ಗೆ ಅವಕಾಶ ಕಲ್ಪಿಸಲಾಗಿದೆ. ಆದರೆ ಮಧ್ಯಮ ಕ್ರಮಾಂಕದ ಆಧಾರ ಸ್ಥಂಭ ಚೇತೇಶ್ವರ್ ಪೂಜಾರ ಕೈಬಿಟ್ಟಿರೋದು ಅಭಿಮಾನಿಗಳನ್ನ ಕೆರಳಿಸಿದೆ. ಕೊಹ್ಲಿ ಹಾಗೂ ಕೋಚ್ ರವಿ ಶಾಸ್ತ್ರಿ ನಿರ್ಧಾರಕ್ಕೆ ಅಭಿಮಾನಿಗಳು ಟ್ವಿಟರ್ ಮೂಲಕ ಪ್ರತಿಕ್ರಿಯಿಸಿದ್ದಾರೆ.

ಎಸೆಕ್ಸ್ ವಿರುದ್ಧದ ಅಭ್ಯಾಸ ಪಂದ್ಯದ 2 ಇನ್ನಿಂಗ್ಸ್‌ಗಳಲ್ಲಿ ಧವನ್ ಶೂನ್ಯ ಸುತ್ತಿದ್ದರು. ಇಷ್ಟಾದರೂ ಧವನ್‌ಗೆ ಅವಕಾಶ ನೀಡಿರೋದು ಅಭಿಮಾನಿಗಳ ಅಸಮಧಾನಕ್ಕೆ ಕಾರಣವಾಗಿದೆ. ಟೀಂ ಇಂಡಿಯಾ ಮಧ್ಯಮ ಕ್ರಮಾಂಕದಲ್ಲಿ ಚೇತೇಶ್ವರ್ ಪೂಜಾರ ಅತ್ಯುತ್ತಮ ಪ್ರದರ್ಶನ ನೀಡಿದ್ದಾರೆ. ಜೊತೆಗೆ ಇಂಗ್ಲೆಂಡ್ ಕೌಂಟಿ ತಂಡದಲ್ಲಿ ಆಡಿದ ಅನುಭವ ಹೊಂದಿದ್ದಾರೆ ಎಂದು ಅಭಿಮಾನಿಗಳು ತಮ್ಮ ಅಭಿಪ್ರಾಯ ಹಂಚಿಕೊಂಡಿದ್ದಾರೆ.

 

 

 

 

 

loader