ಚಾಂಗಜೌ(ಚೀನಾ): ಒಲಿಂಪಿಕ್ಸ್‌ ಮತ್ತು ವಿಶ್ವಚಾಂಪಿಯನ್‌ಶಿಪ್‌ ಬೆಳ್ಳಿ ವಿಜೇತೆ ಪಿ.ವಿ. ಸಿಂಧು, ಇಲ್ಲಿ ಮಂಗಳವಾರ ಆರಂಭಗೊಂಡ ಚೀನಾ ಓಪನ್‌ ಬ್ಯಾಡ್ಮಿಂಟನ್‌ ಟೂರ್ನಿಯಲ್ಲಿ ಪ್ರಿ ಕ್ವಾರ್ಟರ್‌ಗೆ ಪ್ರವೇಶಿಸಿದರೆ, ಸೈನಾ ನೆಹ್ವಾಲ್‌ ಮೊದಲ ಸುತ್ತಲ್ಲೇ ಸೋತು ಹೊರಬಿದ್ದಿದ್ದಾರೆ.

ಇಲ್ಲಿನ ಒಲಿಂಪಿಕ್‌ ಕ್ರೀಡಾ ಕೇಂದ್ರದಲ್ಲಿ ನಡೆದ ಮಹಿಳಾ ಸಿಂಗಲ್ಸ್‌ ಮೊದಲ ಸುತ್ತಿನಲ್ಲಿ ಸಿಂಧು, ಜಪಾನ್‌ನ ಸೇನಾ ಕವಾಕಮಿ ವಿರುದ್ಧ 21-15, 21-13 ನೇರ ಗೇಮ್‌ಗಳಲ್ಲಿ ಗೆಲುವು ಸಾಧಿಸಿದರು. ಇದೇ ವೇಳೆ ಸೈನಾ, ಕೊರಿಯಾದ ಸಂಗ್‌ ಜಿ ಹ್ಯೂನ್‌ ಎದುರು 22-20, 8-21, 14-21 ಗೇಮ್‌ಗಳಲ್ಲಿ ಸೋತು ಹೊರಬಿದ್ದರು.

ಪುರುಷರ ಡಬಲ್ಸ್‌ನಲ್ಲಿ ಮನು ಅತ್ರಿ- ಸುಮಿತ್‌ ರೆಡ್ಡಿ ಜೋಡಿಯು ಚೈನೀಸ್‌ ತೈಪೆಯ ಲಿಯೋ ಮಿನ್‌ ಚುನ್‌-ಸು ಚಿಂಗ್‌ ಹೆಂಗ್‌ ವಿರುದ್ಧ 13-21, 21-13, 21-12 ಗೇಮ್‌ಗಳಲ್ಲಿ ಗೆಲುವು ಸಾಧಿಸಿ, 2ನೇ ಸುತ್ತಿಗೆ ಪ್ರವೇಶಿಸಿತು.