ಟೀಂ ಇಂಡಿಯಾ ಪ್ರದರ್ಶನವನ್ನು ದಿಗ್ಗಜ ಕ್ರಿಕೆಟಿಗರು ಸೇರಿದಂತೆ ಹಲವಾರು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕಾಂಗ್ರೆಸ್ ಪಕ್ಷ ಕೂಡಾ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಶುಭ ಕೋರಿದೆ. ಈ ಶುಭ ಹಾರೈಕೆಯನ್ನು ಕೆಲವರು ಟ್ರೋಲ್ ಮಾಡಿದ್ದಾರೆ.

ಬೆಂಗಳೂರು[ಅ.15]: ಟೀಂ ಇಂಡಿಯಾ ವೆಸ್ಟ್ ಇಂಡೀಸ್ ವಿರುದ್ಧ 2-0 ಅಂತರದಲ್ಲಿ ಟೆಸ್ಟ್ ಸರಣಿ ಗೆಲ್ಲುವ ಮೂಲಕ ಕ್ರಿಕೆಟ್ ಪ್ರೇಮಿಗಳ ಮನಗೆಲ್ಲುವಲ್ಲಿ ಯಶಸ್ವಿಯಾಗಿದೆ. ರಾಜ್’ಕೋಟ್’ನಲ್ಲಿ ನಡೆದ ಮೊದಲ ಟೆಸ್ಟ್’ನಲ್ಲಿ ಇನ್ನಿಂಗ್ಸ್ ಹಾಗೂ 272 ರನ್’ಗಳ ಅಂತರದ ಭರ್ಜರಿ ಜಯಸಾಧಿಸಿದ್ದ ವಿರಾಟ್ ಕೊಹ್ಲಿ ಪಡೆ, ಎರಡನೇ ಟೆಸ್ಟ್’ನಲ್ಲಿ 10 ವಿಕೆಟ್’ಗಳ ಅಂತರದ ಭಾರೀ ಜಯ ಸಾಧಿಸಿದೆ.

ಇದನ್ನು ಓದಿ: ವೆಸ್ಟ್ಇಂಡೀಸ್ ವಿರುದ್ದ ಭಾರತಕ್ಕೆ ಸರಣಿ ಗೆಲುವು- ದಿಗ್ಗಜರು ಹೇಳಿದ್ದೇನು?

ಟೀಂ ಇಂಡಿಯಾ ಪ್ರದರ್ಶನವನ್ನು ದಿಗ್ಗಜ ಕ್ರಿಕೆಟಿಗರು ಸೇರಿದಂತೆ ಹಲವಾರು ಮಂದಿ ಸಾಮಾಜಿಕ ಜಾಲತಾಣಗಳಲ್ಲಿ ಮುಕ್ತಕಂಠದಿಂದ ಶ್ಲಾಘಿಸಿದ್ದಾರೆ. ಕಾಂಗ್ರೆಸ್ ಪಕ್ಷ ಕೂಡಾ ತನ್ನ ಅಧಿಕೃತ ಟ್ವಿಟರ್ ಖಾತೆಯಲ್ಲಿ ಶುಭ ಕೋರಿದೆ. ಈ ಶುಭ ಹಾರೈಕೆಯನ್ನು ಕೆಲವರು ಟ್ರೋಲ್ ಮಾಡಿದ್ದಾರೆ.

ಅಷ್ಟಕ್ಕೂ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದ್ದು ಏನು..?

Scroll to load tweet…

2-0 ಅಂತರದಲ್ಲಿ ಟೆಸ್ಟ್ ಸರಣಿ ಗೆದ್ದ ಮೆನ್-ಇನ್-ಬ್ಲೂ ಪಡೆಗೆ ಅಭಿನಂದನೆಗಳು ಎಂದು ಟ್ವೀಟ್ ಮಾಡಿದೆ. ಇದನ್ನೇ ಕೆಲವರು ಟ್ವೀಟ್’ನಲ್ಲಿ ಕುಹಕವಾಡಿದ್ದಾರೆ. 

Scroll to load tweet…
Scroll to load tweet…
Scroll to load tweet…
Scroll to load tweet…

ಒಬ್ಬ ಇದರಲ್ಲಿ ಎಷ್ಟು ಆಟಗಾರರು ನೀಲಿ ಜೆರ್ಸಿ ಧರಿಸಿದ್ದಾರೆ ಹೇಳಿ ಎಂದಿದ್ದರೆ, ಮತ್ತೋರ್ವ ಬಣ್ಣ ಗುರುತಿಸುವಲ್ಲಿ ವಿಫಲವಾಗಿರುವ ಕಾಂಗ್ರೆಸ್ ಐಟಿ ಸೆಲ್’ಗೆ ಎರಡು ನಿಮಿಷ ಮೌನಾಚರಣೆ ಮಾಡಿ ಎಂದು ಟ್ವೀಟ್ ಮಾಡಿದ್ದಾರೆ. 

ಟೀಂ ಇಂಡಿಯಾವನ್ನು ಸಾಮಾನ್ಯವಾಗಿ ಮೆನ್ ಇನ್ ಬ್ಲೂ, ಬ್ಲೂ ಬಾಯ್ಸ್ ಎಂದೇ ಕರೆಯಲಾಗುತ್ತದೆ. ಅದೇ ಅರ್ಥದಲ್ಲಿ ಕಾಂಗ್ರೆಸ್ ಪಕ್ಷ ಟ್ವೀಟ್ ಮಾಡಿದೆ. ಇದನ್ನೇ ಕೆಲವರು ಟ್ರೋಲ್ ಮಾಡಿದ್ದಾರೆ.