ಮೊದಲ ಟಿ20 ಪಂದ್ಯ ಗೆದ್ದಿದ್ದ ಆಸ್ಟ್ರೇಲಿಯಾ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. ಎರಡನೇ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಮೂರನೇ ಪಂದ್ಯವನ್ನು ಟೀಂ ಇಂಡಿಯಾ ಜಯಿಸಿದರೆ ಸರಣಿ ಸಮಬಲ ಸಾಧಿಸಿದಂತಾಗುತ್ತದೆ.
ಸಿಡ್ನಿ[ನ.25]: ಭಾರತ-ಆಸ್ಟ್ರೇಲಿಯಾ ನಡುವಿನ ಮೂರನೇ ಹಾಗೂ ಅಂತಿಮ ಟಿ20 ಪಂದ್ಯದಲ್ಲಿ ಟಾಸ್ ಗೆದ್ದ ಆಸ್ಟ್ರೇಲಿಯಾ ಮೊದಲು ಬ್ಯಾಟಿಂಗ್ ಆಯ್ದುಕೊಂಡಿದೆ.
ಮೊದಲ ಟಿ20 ಪಂದ್ಯ ಗೆದ್ದಿದ್ದ ಆಸ್ಟ್ರೇಲಿಯಾ ಸರಣಿಯಲ್ಲಿ 1-0 ಮುನ್ನಡೆ ಕಾಯ್ದುಕೊಂಡಿದೆ. ಎರಡನೇ ಪಂದ್ಯ ಮಳೆಯಿಂದಾಗಿ ರದ್ದಾಗಿತ್ತು. ಇದೀಗ ಮೂರನೇ ಪಂದ್ಯವನ್ನು ಟೀಂ ಇಂಡಿಯಾ ಜಯಿಸಿದರೆ ಸರಣಿ ಸಮಬಲ ಸಾಧಿಸಿದಂತಾಗುತ್ತದೆ.
ಭಾರತ ತಂಡದಲ್ಲಿ ಯಾವುದೇ ಬದಲಾವಣೆ ಮಾಡಲಾಗಿಲ್ಲ. ಇನ್ನು ಆಸ್ಟ್ರೇಲಿಯಾ ತಂಡದಲ್ಲಿ ಒಂದು ಬದಲಾವಣೆ ಮಾಡಲಾಗಿದ್ದು, ಬೆಹೆಡ್ರಾಫ್ ಬದಲಿಗೆ ಮಿಚೆಲ್ ಸ್ಟಾರ್ಕ್ ತಂಡ ಕೂಡಿಕೊಂಡಿದ್ದಾರೆ.
ಇದೀಗ ಆಸ್ಟ್ರೇಲಿಯಾ ಮೂರು ಓವರ್ ಮುಕ್ತಾಯದ ವೇಳೆಗೆ ವಿಕೆಟ್ ನಷ್ಟವಿಲ್ಲದೇ ಆಸ್ಟ್ರೇಲಿಯಾ 21 ರನ್ ಬಾರಿಸಿದೆ.