ಕ್ರಿಕೆಟ್ ಇತಿಹಾಸದಲ್ಲಿ ಪ್ರತಿ ದಿನವೂ ಒಂದಲ್ಲ ಒಂದು ದಾಖಲೆಗಳು ನಿರ್ಮಾಣವಾಗುತ್ತೆ. ಇಂತಹ ದಾಖಲೆಗಳು, ಐತಿಹಾಸಿಕ ನಿಮಿಷಗಳನ್ನ ಮೆಲುಕು ಹಾಕುವ ವಿಶೇಷ ಪ್ರಯತ್ನವೇ ಕ್ರಿಕೆಟ್ ಸೀಕ್ರೆಟ್ಸ್. ಹಾಗಾದರೆ ಜೂನ್. 10 ರ ಸ್ಪೆಷಾಲಿಟಿ ಏನು? ಇಲ್ಲಿದೆ ವಿವರ.

ಬೆಂಗಳೂರು(ಜೂನ್.10): ಈ ದಿನ ಭಾರತೀಯರು ಯಾರು ಮರೆಯುವುದಿಲ್ಲ. ಕಾರಣ ಇದೇ ದಿನ ಇಂಗ್ಲೆಂಡ್‌ನ ಲಾರ್ಡ್ಸ್ ಮೈದಾನದಲ್ಲಿ ಮೊದಲ ಬಾರಿಗೆ ಟೆಸ್ಟ್ ಪಂದ್ಯ ಗೆದ್ದ ದಿನ. ಅದು ಜೂನ್.10, 1986ರಲ್ಲಿ ಭಾರತ ಹಾಗೂ ಇಂಗ್ಲೆಂಡ್ ನಡುವಿನ ಲಾರ್ಡ್ಸ್ ಟೆಸ್ಚ್ ರೋಚಕ ಘಟ್ಟ ತಲುಪಿತ್ತು. ಮೊದಲ ಟೆಸ್ಟ್ ಪಂದ್ಯದ ಅಂತಿಮ ದಿನ ಭಾರತ ಇತಿಹಾಸ ರಚಿಸಿತ್ತು.

ಮೊದಲ ಇನ್ನಿಂಗ್ಸ್‌ನಲ್ಲಿ ಭಾರತ 294 ರನ್‌ಗಳಿಗೆ ಆಲೌಟ್ ಆಗಿತ್ತು. ಇದಕ್ಕುತ್ತರವಾಗಿ ಭಾರತ 341 ರನ್ ಸಿಡಿಸಿತು. ಈ ಮೂಲಕ ಮೊದಲ ಇನ್ನಿಂಗ್ಸ್‌ನಲ್ಲಿ ಟೀಂ ಇಂಡಿಯಾ 47 ರನ್‌ಗಳ ಮುನ್ನಡೆ ಪಡೆದುಕೊಂಡಿತು. ದ್ವಿತೀಯ ಇನ್ನಿಂಗ್ಸ್‌ನಲ್ಲಿ 180 ರನ್ ಸಿಡಿಸಿದ ಇಂಗ್ಲೆಂಡ್ ಭಾರತಕ್ಕೆ 134 ರನ್‌ಗಳ ಟಾರ್ಗೆಟ್ ನೀಡಿತ್ತು.

134 ರನ್‌ಗಳ ಸುಲಭ ಗುರಿ ಪಡೆದ ಭಾರತ 78 ರನ್ ಗಳಿಸುವಷ್ಟರಲ್ಲೇ 4 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿತು. ಆದರೆ ನಾಯಕ ಕಪಿಲ್ ದೇವ್ ಹಾಗೂ ರವಿ ಶಾಸ್ತ್ರಿ ಜೊತೆಯಾಟದಿಂದ ಭಾರತ ಚೇತರಿಸಿಕೊಂಡಿತು. ಕಪಿಲ್ 10 ಎಸೆತದಲ್ಲಿ 23 ರನ್ ಸಿಡಿಸಿ ಭಾರತಕ್ಕೆ 5 ವಿಕೆಟ್‌ಗಳ ಭರ್ಜರಿ ಗೆಲುವು ತಂದುಕೊಟ್ಟರು.