Asianet Suvarna News Asianet Suvarna News

ನೂತನ ಟೆಸ್ಟ್ ರ‍್ಯಾಂಕಿಂಗ್ ಪ್ರಕಟ: ಕಿಂಗ್ ಕೊಹ್ಲಿ ನಂ.1

ಪರ್ತ್ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡು 4 ಪಂದ್ಯಗಳ ಸರಣಿಯನ್ನು 1-1ರಿಂದ ಸಮಬಲ ಸಾಧಿಸಿದ್ದರೂ ಭಾರತ ತಂಡ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ 116 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನ ಉಳಿಸಿಕೊಂಡಿದೆ.

Cricket ICC Test rankings Virat Kohli maintains top spot
Author
Dubai - United Arab Emirates, First Published Dec 21, 2018, 12:02 PM IST

ದುಬೈ[ಡಿ.21]: ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್ ಪ್ರಕಟವಾಗಿದ್ದು, ಬ್ಯಾಟ್ಸ್’ಮನ್’ಗಳ ಪಟ್ಟಿಯಲ್ಲಿ ಭಾರತ ಕ್ರಿಕೆಟ್ ತಂಡದ ನಾಯಕ ವಿರಾಟ್ ಕೊಹ್ಲಿ ಅಗ್ರಸ್ಥಾನ ಕಾಯ್ದುಕೊಂಡಿದ್ದಾರೆ. ಯುವ ವಿಕೆಟ್’ಕೀಪರ್ ಮತ್ತು ಬ್ಯಾಟ್ಸ್‌ಮನ್ ರಿಷಭ್ ಪಂತ್ ಮತ್ತು ವೇಗಿ ಜಸ್ಪ್ರೀತ್ ಬುಮ್ರಾ ವೃತ್ತಿ ಜೀವನದ ಶ್ರೇಷ್ಠ ರ‍್ಯಾಂಕಿಂಗ್ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. 

ಕೊಹ್ಲಿ ವಿರುದ್ಧ ತಿರುಗಿಬಿದ್ಧ ಟೀಂ ಇಂಡಿಯಾ ಮಾಜಿ ನಾಯಕ..!

ಪರ್ತ್ ಟೆಸ್ಟ್‌ನಲ್ಲಿ ಆಸ್ಟ್ರೇಲಿಯಾ ವಿರುದ್ಧ ಸೋಲು ಕಂಡು 4 ಪಂದ್ಯಗಳ ಸರಣಿಯನ್ನು 1-1ರಿಂದ ಸಮಬಲ ಸಾಧಿಸಿದ್ದರೂ ಭಾರತ ತಂಡ ಐಸಿಸಿ ಟೆಸ್ಟ್ ರ‍್ಯಾಂಕಿಂಗ್‌ನಲ್ಲಿ 116 ರೇಟಿಂಗ್ ಅಂಕಗಳೊಂದಿಗೆ ಅಗ್ರಸ್ಥಾನ ಉಳಿಸಿಕೊಂಡಿದೆ. ಆಸೀಸ್ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಕೊಹ್ಲಿ 935 ರೇಟಿಂಗ್ ಅಂಕಗಳೊಂದಿಗೆ ಕಾಲಿಟ್ಟಿದ್ದರು. ಅಡಿಲೇಡ್ ಟೆಸ್ಟ್‌ನಲ್ಲಿ ಆಸೀಸ್ ವಿರುದ್ಧ ಭಾರತ ಗೆದ್ದಾಗ ಕೊಹ್ಲಿ 15 ಅಂಕಗಳನ್ನು ಕಳೆದುಕೊಂಡು 920 ಅಂಕ ಪಡೆದಿದ್ದರು. ಆಗ ನ್ಯೂಜಿಲೆಂಡ್‌ನ ಕೇನ್ ವಿಲಿಯಮ್ಸನ್’ಗಿಂತ ಕೇವಲ 7 ಅಂಕಗಳ ಅಂತರ ಪಡೆದಿದ್ದರು. ಈ ವೇಳೆಯಲ್ಲಿ ಕೊಹ್ಲಿ ಅಗ್ರಸ್ಥಾನ ಕಳೆದುಕೊಳ್ಳುವ ಭೀತಿಯಲ್ಲಿದ್ದರು. ಆದರೆ ಪರ್ತ್ ಟೆಸ್ಟ್‌ನಲ್ಲಿ ಶತಕ (123) ಸಿಡಿಸಿದ್ದ ಕೊಹ್ಲಿ 14 ಅಂಕಗಳನ್ನು ಹೆಚ್ಚಿಸಿಕೊಂಡಿದ್ದಾರೆ.

ತಂಡದ ಆಯ್ಕೆ ಎಡವಟ್ಟು -ಕೊಹ್ಲಿ ,ಶಾಸ್ತ್ರಿಗೆ ಖಡಕ್ ಎಚ್ಚರಿಕೆ!

ಇದೀಗ ಕೊಹ್ಲಿ 934 ರೇಟಿಂಗ್ ಅಂಕದೊಂದಿಗೆ ಅಗ್ರಸ್ಥಾನ ಉಳಿಸಿಕೊಂಡಿದ್ದಾರೆ. ಇದು ವಿಲಿಯಮ್ಸನ್‌ಗಿಂತ 19 ಅಂಕ ಅಂತರ ಸಾಧಿಸಿದ್ದಾರೆ. 2ನೇ ಸ್ಥಾನದಲ್ಲಿರುವ ವಿಲಿಯಮ್ಸನ್ (915) ಅಂಕಗಳಿಸಿದ್ದಾರೆ. ಭಾರತದ ಭರವಸೆ ಬ್ಯಾಟ್ಸ್‌ಮನ್ ಅಜಿಂಕ್ಯ ರಹಾನೆ 2 ಸ್ಥಾನ ಮೇಲಕ್ಕೇರಿದ್ದು ಅಗ್ರ 15ರಲ್ಲಿ ಸ್ಥಾನ ಪಡೆಯುವಲ್ಲಿ ಸಫಲರಾಗಿದ್ದಾರೆ. ಇನ್ನೂ ಬೌಲಿಂಗ್ ವಿಭಾಗದಲ್ಲಿ ಜಸ್ಪ್ರೀತ್ ಬುಮ್ರಾ 28ನೇ ಸ್ಥಾನ ಪಡೆದು ವೃತ್ತಿ ಜೀವನದ ಶ್ರೇಷ್ಠ ಸಾಧನೆ ಮಾಡಿದ್ದಾರೆ. ಮತ್ತೊಬ್ಬ ಭಾರತದ ವೇಗಿ ಮೊಹಮದ್ ಶಮಿ 2 ಸ್ಥಾನ ಜಿಗಿತ ಕಂಡಿದ್ದು 24ನೇ ಸ್ಥಾನ ಪಡೆದಿದ್ದಾರೆ. 

Follow Us:
Download App:
  • android
  • ios