ವೈಜಾಗ್[ಫೆ.24]: ಸತತ ವೈಫಲ್ಯಗಳಿಂದ ಹೊರಬರುವಲ್ಲಿ ಕನ್ನಡಿಗ ಕೆ.ಎಲ್ ರಾಹುಲ್ ಯಶಸ್ವಿಯಾಗಿದ್ದಾರೆ. ಸಿಕ್ಕ ಅವಕಾಶವನ್ನು ಸರಿಯಾಗಿ ಬಳಸಿಕೊಂಡ ರಾಹುಲ್ ಅರ್ಧಶತಕ ಸಿಡಿಸಿ ವಿಕೆಟ್ ಒಪ್ಪಿಸಿದ್ದಾರೆ. ಇದೀಗ 15 ಓವರ್ ಮುಕ್ತಾಯದ ವೇಳೆಗೆ ಭಾರತ 6 ವಿಕೆಟ್ ಕಳೆದುಕೊಂಡು 100 ರನ್ ಬಾರಿಸಿದೆ.

ಟಾಸ್ ಸೋತರೂ ಮೊದಲು ಬ್ಯಾಟಿಂಗ್ ಮಾಡುವ ಅವಕಾಶ ಪಡೆದ ಭಾರತ ಆರಂಭದಲ್ಲೇ ರೋಹಿತ್ ಶರ್ಮಾ ವಿಕೆಟ್ ಕಳೆದುಕೊಂಡಿತು. ಶಿಖರ್ ಧವನ್ ಬದಲಿಗೆ ತಂಡದಲ್ಲಿ ಸ್ಥಾನ ಪಡೆದ ರಾಹುಲ್ ಭರ್ಜರಿ ಇನ್ನಿಂಗ್ಸ್ ಕಟ್ಟಿದರು. ಎರಡನೇ ವಿಕೆಟ್’ಗೆ ನಾಯಕ ವಿರಾಟ್ ಕೊಹ್ಲಿ ಕೂಡಿಕೊಂಡ ರಾಹುಲ್ 55 ರನ್’ಗಳ ಜತೆಯಾಟ ನಿಭಾಯಿಸಿದರು. ಈ ವೇಳೆ 24 ರನ್ ಸಿಡಿಸಿ ಮುನ್ನುಗ್ಗುತ್ತಿದ್ದ ವಿರಾಟ್ ಬಲಿ ಪಡೆಯುವಲ್ಲಿ ಜಂಪಾ ಯಶಸ್ವಿಯಾದರು. ಇನ್ನು ಪಂತ್ 3 ಹಾಗೂ ದಿನೇಶ್ ಕಾರ್ತಿಕ್ ಹಾಗೂ ಕೃನಾಲ್ ತಲಾ 1 ರನ್ ಬಾರಿಸಿ ಪೆವಿಲಿಯನ್ ಸೇರುವ ಮೂಲಕ ನಿರೀಕ್ಷೆ ಹುಸಿಗೊಳಿಸಿದರು.

ಇದೀಗ ಧೋನಿ ಹಾಗೂ ಉಮೇಶ್ ಯಾದವ್ ಬ್ಯಾಟಿಂಗ್ ನಡೆಸುತ್ತಿದ್ದಾರೆ.