ಬೆಂಗಳೂರು[ಜ.19]: ಟೀಂ ಇಂಡಿಯಾ ಅನುಭವಿ ಬ್ಯಾಟ್ಸ್’ಮನ್ ಮಹೇಂದ್ರ ಸಿಂಗ್ ಧೋನಿ ಸಮಯೋಚಿತ ಬ್ಯಾಟಿಂಗ್ ಪ್ರದರ್ಶನದ ನೆರವಿನಿಂದ ಟೀಂ ಇಂಡಿಯಾ ಇದೇ ಮೊದಲ ಬಾರಿಗೆ ಆಸ್ಟ್ರೇಲಿಯಾ ನೆಲದಲ್ಲಿ ದ್ವಿಪಕ್ಷೀಯ ಸರಣಿ ಜಯಿಸಿದ ಸಾಧನೆ ಮಾಡಿದೆ. ಧೋನಿ ಸತತ 3 ಅರ್ಧಶತಕ ಸಿಡಿಸುವ ಮೂಲಕ ಟೀಕಾಕಾರರ ಬಾಯಿ ಮುಚ್ಚಿಸಿದ್ದಾರೆ.

2018ರಲ್ಲಿ ಒಂದೇ ಒಂದು ಅರ್ಧಶತಕ ಗಳಿಸಲು ವಿಫಲವಾಗಿದ್ದ ಧೋನಿ, 2019ರಲ್ಲಿ ಹ್ಯಾಟ್ರಿಕ್ ಅರ್ಧಶತಕ ಸಿಡಿಸುವ ಮೂಲಕ ಭಾರತ ಚಾರಿತ್ರಿಕ ಸಾಧನೆ ಮಾಡಲು ಕಾರಣರಾದರು. ಮೊದಲ ಏಕದಿನ ಪಂದ್ಯದಲ್ಲಿ ಮಂದಗತಿಯ ಬ್ಯಾಟಿಂಗ್ ನಡೆಸಿದ್ದ ಧೋನಿ, ಆ ಬಳಿಕ ನಡೆದ ಎರಡು ಪಂದ್ಯಗಳಲ್ಲಿ ಎದುರಾಳಿ ಬೌಲರ್’ಗಳ ನೀರಿಳಿಸುವಲ್ಲಿ ಯಶಸ್ವಿಯಾದರು.

37 ವರ್ಷದ ಧೋನಿ 193 ರನ್ ಸಿಡಿಸಿ ಸರಣಿಶ್ರೇಷ್ಠ ಗೌರವಕ್ಕೂ ಭಾಜನರಾದರು. ಧೋನಿ ಪ್ರದರ್ಶನ ಕಂಡ ಟ್ವಿಟರಿಗರು ಏನಂದ್ರು ನೀವೇ ನೋಡಿ..