ಆಸ್ಟ್ರೇಲಿಯಾವನ್ನು 326 ರನ್’ಗಳಿಗೆ ಕಟ್ಟಿಹಾಕಿ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಭಾರತ ಆರಂಭದಲ್ಲೇ ಮುಗ್ಗರಿಸಿತು. ಮಿಚೆಲ್ ಸ್ಟಾರ್ಕ್ ಬೌಲಿಂಗ್’ನಲ್ಲಿ ಮುರುಳಿ ವಿಜಯ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. 

ಪರ್ತ್[ಡಿ.15]: ಸಿಕ್ಕ ಮತ್ತೊಂದು ಅವಕಾಶವನ್ನು ಸದುಪಯೋಗಪಡಿಸಿಕೊಳ್ಳುವಲ್ಲಿ ಟೀಂ ಇಂಡಿಯಾ ಆರಂಭಿಕರು ಮತ್ತೊಮ್ಮೆ ವಿಫಲವಾಗಿದ್ದಾರೆ. ಇದೀಗ ಟೀಂ ಇಂಡಿಯಾ 8 ರನ್’ಗಳಿಗೆ 2 ವಿಕೆಟ್ ಕಳೆದುಕೊಂಡು ಸಂಕಷ್ಟಕ್ಕೆ ಸಿಲುಕಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಆಸ್ಟ್ರೇಲಿಯಾವನ್ನು 326 ರನ್’ಗಳಿಗೆ ಕಟ್ಟಿಹಾಕಿ ಮೊದಲ ಇನ್ನಿಂಗ್ಸ್ ಆರಂಭಿಸಿದ್ದ ಭಾರತ ಆರಂಭದಲ್ಲೇ ಮುಗ್ಗರಿಸಿತು. ಮಿಚೆಲ್ ಸ್ಟಾರ್ಕ್ ಬೌಲಿಂಗ್’ನಲ್ಲಿ ಮುರುಳಿ ವಿಜಯ್ ಶೂನ್ಯ ಸುತ್ತಿ ಪೆವಿಲಿಯನ್ ಸೇರಿದರು. ಇದರ ಬೆನ್ನಲ್ಲೇ ಕೆ.ಎಲ್ ರಾಹುಲ್ 17 ಎಸೆತಗಳನ್ನೆದುರಿಸಿ ಕೇವಲ 2 ರನ್ ಬಾರಿಸಿ ಕ್ಲೀನ್ ಬೌಲ್ಡ್ ಆಗಿ ನಿರಾಸೆ ಅನುಭವಿಸಿದರು. ಪೃಥ್ವಿ ಶಾ ಅನುಪಸ್ಥಿಯಲ್ಲಿ ಸಿಕ್ಕ ಅವಕಾಶ ಉಪಯೋಗಿಸಿಕೊಳ್ಳುವಲ್ಲಿ ವಿಜಯ್ ಹಾಗೂ ರಾಹುಲ್ ಮತ್ತೊಮ್ಮೆ ವಿಫಲವಾಗಿದ್ದಾರೆ.

ಪರ್ತ್ ಟೆಸ್ಟ್: ವೇಗಿಗಳ ಅಬ್ಬರಕ್ಕೆ ಆಸಿಸ್ ಆಲೌಟ್

ಇದೀಗ ಟೀಂ ಇಂಡಿಯಾ 7 ಓವರ್ ಮುಕ್ತಾಯಕ್ಕೆ 2 ವಿಕೆಟ್ ಕಳೆದುಕೊಂಡು 16 ರನ್ ಬಾರಿಸಿದ್ದು, ಕೊಹ್ಲಿ 6 ಮತ್ತು ಪೂಜಾರ 2 ರನ್ ಬಾರಿಸಿದ್ದಾರೆ.