ಬೇ ಓವಲ್[ಜ.26]: ಭಾರತ-ನ್ಯೂಜಿಲೆಂಡ್ ನಡುವಿನ ಎರಡನೇ ಏಕದಿನ ಪಂದ್ಯದಲ್ಲಿ ಟಾಸ್ ಗೆದ್ದ ಭಾರತ ಬ್ಯಾಟಿಂಗ್ ಆಯ್ದುಕೊಂಡಿದ್ದು, ಮೊದಲ 10 ಓವರ್ ಮುಕ್ತಾಯದ ವೇಳೆಗೆ ಭಾರತ ವಿಕೆಟ್ ನಷ್ಟವಿಲ್ಲದೇ 56 ರನ್ ಬಾರಿಸಿದೆ.

ಇಲ್ಲಿನ ಬೇ ಓವಲ್’ನಲ್ಲಿ ನಡೆಯುತ್ತಿರುವ ಪಂದ್ಯದಲ್ಲಿ ಟಾಸ್ ಗೆದ್ದ ವಿರಾಟ್ ಬ್ಯಾಟಿಂಗ್ ಆಯ್ದುಕೊಂಡಿದ್ದು, ತಂಡದಲ್ಲಿ ಯಾವುದೇ ಬದಲಾವಣೆ ಮಾಡಿಲ್ಲ. ಇನ್ನು ನ್ಯೂಜಿಲೆಂಡ್ ತಂಡದಲ್ಲಿ 2 ಬದಲಾವಣೆ ಮಾಡಲಾಗಿದ್ದು, ಇಶ್ ಸೋಧಿ ಹಾಗೂ ಕಾಲಿನ್ ಡಿ ಗ್ರ್ಯಾಂಡ್’ಹೋಮ್ ತಂಡ ಕೂಡಿಕೊಂಡಿದ್ದು, ಸ್ಯಾಂಟರ್ ಮತ್ತು ಟಿಮ್ ಸೌಥಿ ಕೈಬಿಡಲಾಗಿದೆ.

ಮೊದಲ ಪಂದ್ಯವನ್ನು ಜಯಿಸಿ ಆತ್ಮವಿಶ್ವಾಸದಿಂದ ಬೀಗುತ್ತಿರುವ ಟೀಂ ಇಂಡಿಯಾ ಉತ್ತಮ ಆರಂಭ ಪಡೆದಿದೆ. ಧವನ್ 21 ಎಸೆತಗಳಲ್ಲಿ 24 ರನ್ ಸಿಡಿಸಿದ್ದರೆ, ರೋಹಿತ್ 33 ಎಸೆತಗಳಲ್ಲಿ 25 ರನ್ ಬಾರಿಸಿ ಬ್ಯಾಟಿಂಗ್ ನಡೆಸುತ್ತಿದ್ದಾರೆ.