Asianet Suvarna News Asianet Suvarna News

ಕೊಹ್ಲಿ ದಾಖಲೆಯನ್ನೇ ಅಳಿಸಿಹಾಕಿದ ಹಿಟ್’ಮ್ಯಾನ್..!

ಹಲವು ದಾಖಲೆಗಳ ಪೈಕಿ ಅಂತರಾಷ್ಟ್ರೀಯ ಟಿ20 ಕ್ರಿಕೆಟ್’ನಲ್ಲಿ 4 ಶತಕ ಸಿಡಿಸಿದ ವಿಶ್ವದ ಮೊದಲ ಕ್ರಿಕೆಟಿಗ ಎನ್ನುವ ಕೀರ್ತಿಗೆ ಪಾತ್ರವಾದ ರೋಹಿತ್, ವಿರಾಟ್ ಕೊಹ್ಲಿಯ ದಾಖಲೆಯನ್ನೂ ಅಳಿಸಿಹಾಕಿದ್ದಾರೆ. 2ನೇ ಪಂದ್ಯ ಆರಂಭಕ್ಕೂ ಮುನ್ನ ಟಿ20 ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ ಗರಿಷ್ಠ ರನ್ ಸಿಡಿಸಿದ ಆಟಗಾರರ ಪಟ್ಟಿಯಲ್ಲಿದ್ದ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ್ದಾರೆ. 

ಬೆಂಗಳೂರು[ನ.07]: ಟೀಂ ಇಂಡಿಯಾ ಹಂಗಾಮಿ ನಾಯಕ ರೋಹಿತ್ ಶರ್ಮಾ ದೀಪಾವಳಿ ಸಂದರ್ಭದಲ್ಲೇ ಶತಕ ಸಿಡಿಸುವ ಮೂಲಕ ಬೆಳಕಿನ ಹಬ್ಬವನ್ನು ಭರ್ಜರಿಯಾಗಿ ಸ್ವಾಗತಿಸಿದ್ದಾರೆ. ಭಾರತ-ವೆಸ್ಟ್ ಇಂಡೀಸ್ ನಡುವಿನ ಎರಡನೇ ಟಿ20 ಪಂದ್ಯದಲ್ಲಿ ಹಲವಾರು ದಾಖಲೆಗಳನ್ನು ರೋಹಿತ್ ನಿರ್ಮಿಸಿದ್ದಾರೆ.