ವಿಜಯ್ ಹಜಾರೆ ಟೂರ್ನಿಯಲ್ಲಿ ಮುಂಬೈ ತಂಡವು ಗ್ರೂಪ್ ಹಂತದಲ್ಲಿ ಅಗ್ರಸ್ಥಾನದೊಂದಿಗೆ ಕ್ವಾರ್ಟರ್’ಫೈನಲ್ ಹಂತ ಪ್ರವೇಶಿಸಿದೆ. ಇದೀಗ ಮುಂಬೈ ತಂಡವು ಅಕ್ಟೋಬರ್ 14ರಂದು ಬಿಹಾರ ತಂಡವನ್ನು ಎದುರಿಸಲಿದೆ.
ನವದೆಹಲಿ(ಅ.09): ವೆಸ್ಟ್ ಇಂಡೀಸ್ ವಿರುದ್ಧದ ಸೀಮಿತ ಓವರ್’ಗಳ ಸರಣಿಗೂ ಮುನ್ನ ಟೀಂ ಇಂಡಿಯಾ ಆರಂಭಿಕ ಬ್ಯಾಟ್ಸ್’ಮನ್ ರೋಹಿತ್ ಶರ್ಮಾ ವಿಜಯ್ ಹಜಾರೆ ಟೂರ್ನಿಯಲ್ಲಿ ಮುಂಬೈ ಪರ ಕಣಕ್ಕಿಳಿಯಲಿದ್ದಾರೆ. ಮುಂಬೈ ತಂಡದ ಪರ ಆರಂಭಿಕನಾಗಿ ಕಣಕ್ಕಿಳಿಯಲಿದ್ದಾರೆ ಎಂದು ವರದಿಯಾಗಿದೆ
ಅಕ್ಟೋಬರ್ 10ರಂದು ಮುಂಬೈ ತಂಡದ ಆಟಗಾರರ ಆಯ್ಕೆ ನಡೆಯಲಿದ್ದು, ರೋಹಿತ್ ಅವರನ್ನು ತಂಡಕ್ಕೆ ಆಯ್ಕೆ ಮಾಡಿಕೊಳ್ಳಲಾಗುವುದು ಎಂದು ಮುಂಬೈ ತಂಡದ ಆಯ್ಕೆ ಸಮಿತಿ ಮುಖ್ಯಸ್ಥ ಅಜಿತ್ ಅಗರ್’ಕರ್ ಹೇಳಿದ್ದಾರೆ. ಶ್ರೇಯಸ್ ಅಯ್ಯರ್ ನಾಯಕತ್ವದಲ್ಲಿ ರೋಹಿತ್ ಅವರು ಒಂದೆರಡು ಪಂದ್ಯಗಳನ್ನು ಆಡಲಿದ್ದಾರೆ ಎಂದು ಅಗರ್’ಕರ್ ಹೇಳಿದ್ದಾರೆ.
ವಿಜಯ್ ಹಜಾರೆ ಟೂರ್ನಿಯಲ್ಲಿ ಮುಂಬೈ ತಂಡವು ಗ್ರೂಪ್ ಹಂತದಲ್ಲಿ ಅಗ್ರಸ್ಥಾನದೊಂದಿಗೆ ಕ್ವಾರ್ಟರ್’ಫೈನಲ್ ಹಂತ ಪ್ರವೇಶಿಸಿದೆ. ಇದೀಗ ಮುಂಬೈ ತಂಡವು ಅಕ್ಟೋಬರ್ 14ರಂದು ಬಿಹಾರ ತಂಡವನ್ನು ಎದುರಿಸಲಿದೆ.
ಇತ್ತೀಚೆಗಷ್ಟೇ ರೋಹಿತ್ ಶರ್ಮಾ ನೇತೃತ್ವದ ಟೀಂ ಇಂಡಿಯಾ ಏಷ್ಯಾಕಪ್ ಟೂರ್ನಿಯಲ್ಲಿ ಬಾಂಗ್ಲಾದೇಶವನ್ನು ಮಣಿಸಿ ಚಾಂಪಿಯನ್ ಆಗಿ ಹೊರಹೊಮ್ಮಿತ್ತು. ಈ ಮೊದಲು ಧೋನಿ ಕೂಡಾ ವಿಜಯ್ ಹಜಾರೆ ಟೂರ್ನಿಯಲ್ಲಿ ಜಾರ್ಖಂಡ್ ಪರ ಕಣಕ್ಕಿಳಿಯಲಿದ್ದಾರೆ ಎಂದು ಸುದ್ದಿಯಾಗಿತ್ತು.