ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ, ಸ್ಫೋಟಕ ಬ್ಯಾಟ್ಸ್'ಮನ್ ವಿರೇಂದ್ರ ಸೆಹ್ವಾಗ್ 2001 ನೇ ಇಸವಿಯ ಈ ದಿನ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಕ್ರಿಕೆಟ್'ಗೆ ಪದಾರ್ಪಣೆ ಮಾಡಿದರು.

* ಟೀಂ ಇಂಡಿಯಾದ ಮಾಜಿ ಕ್ರಿಕೆಟಿಗ, ಸ್ಫೋಟಕ ಬ್ಯಾಟ್ಸ್'ಮನ್ ವಿರೇಂದ್ರ ಸೆಹ್ವಾಗ್ 2001 ನೇ ಇಸವಿಯ ಈ ದಿನ ದಕ್ಷಿಣ ಆಫ್ರಿಕಾ ವಿರುದ್ಧ ಟೆಸ್ಟ್ ಕ್ರಿಕೆಟ್'ಗೆ ಪದಾರ್ಪಣೆ ಮಾಡಿದರು. ಅಷ್ಟೇ ಅಲ್ಲ ತಾವಾಡಿದ ಚೊಚ್ಚಲ ಪಂದ್ಯದಲ್ಲಿಯೇ (105 ರನ್) ಶತಕ ಬಾರಿಸಿ ಸ್ಮರಣೀಯವಾಗಿಸಿಕೊಂಡರು.

* ಟಿ20 ಕ್ರಿಕೆಟ್'ನಲ್ಲಿ ಅತಿಹೆಚ್ಚು ಸಿಕ್ಸರ್ ಸಿಡಿಸಿದ ಆಟಗಾರ ಎನ್ನುವ ಗೌರವಕ್ಕೆ ರೋಹಿತ್ ಶರ್ಮಾ ಪಾತ್ರವಾಗಿದ್ದಾರೆ. ಇದೀಗ ರೋಹಿತ್ ಶರ್ಮಾ 268 ಸಿಕ್ಸರ್ ಸಿಡಿಸಿದ್ದು, ಸುರೇಶ್ ರೈನಾ(265 ಸಿಕ್ಸರ್) ಹೆಸರಿನಲ್ಲಿದ್ದ ದಾಖಲೆಯನ್ನು ಅಳಿಸಿಹಾಕಿದ್ದಾರೆ.

* ಪ್ರಥಮ ದರ್ಜೆ ಕ್ರಿಕೆಟ್'ನಲ್ಲಿ ಚೇತೇಶ್ವರ ಪೂಜಾರ 12 ದ್ವಿಶತಕ ಬಾರಿಸುವುದರೊಂದಿಗೆ ಅತಿಹೆಚ್ಚು ದ್ವಿಶತಕ ಸಿಡಿಸಿದ ಆಟಗಾರ ಎನ್ನುವ ಕೀರ್ತಿಗೆ ಪಾತ್ರರಾಗಿದ್ದಾರೆ. ಈ ಮೊದಲು ಪ್ರಥಮ ದರ್ಜೆ ಕ್ರಿಕೆಟ್'ನಲ್ಲಿ ವಿಜಯ್ ಮರ್ಚೆಂಟ್ 11 ದ್ವಿಶತಕ ಸಿಡಿಸಿದ್ದರು.

* ಅಂತರಾಷ್ಟ್ರೀಯ ಕ್ರಿಕೆಟ್'ನಲ್ಲಿ ನಾಯಕನಾಗಿ ಅತಿಹೆಚ್ಚು ಶತಕ ಸಿಡಿಸಿದ ಬ್ಯಾಟ್ಸ್'ಮನ್'ಗಳ ಪಟ್ಟಿಯಲ್ಲಿ ವಿರಾಟ್ ಕೊಹ್ಲಿ(19 ಶತಕ) ಮೂರನೇ ಸ್ಥಾನಕ್ಕೇರಿದ್ದಾರೆ. ಈ ಪಟ್ಟಿಯಲ್ಲಿ ಆಸ್ಟ್ರೇಲಿಯಾ ಕ್ರಿಕೆಟ್ ದಂತಕತೆ ರಿಕಿ ಪಾಂಟಿಂಗ್(41 ಶತಕ) ಮೊದಲ ಸ್ಥಾನದಲ್ಲಿದ್ದು, ದಕ್ಷಿಣ ಆಫ್ರಿಕಾ ತಂಡದ ಯಶಸ್ವಿ ನಾಯಕರಾಗಿದ್ದ ಗ್ರೇಮ್ ಸ್ಮಿತ್(33 ಶತಕ) ಎರಡನೇ ಸ್ಥಾನದಲ್ಲಿದ್ದಾರೆ.