ಸೆಹ್ವಾಗ್ ದಾಖಲೆ ಪುಡಿ ಮಾಡಲು ಸಜ್ಜಾದ ಕೊಹ್ಲಿ!

ನ್ಯೂಜಿಲೆಂಡ್ ವಿರುದ್ದದ ಏಕದಿನ ಸರಣಿಗೆ ಸಜ್ಜಾಗಿರುವ ನಾಯಕ ವಿರಾಟ್ ಕೊಹ್ಲಿ ಇದೀಗ ಹಲವು ದಾಖಲೆಗಳ ಮೇಲೆ ಕಣ್ಣಿಟ್ಟಿದ್ದಾರೆ. ಈ ಪ್ರವಾಸದಲ್ಲಿ ಸಚಿನ್ ತೆಂಡೂಲ್ಕರ್ ಹಾಗೂ ವಿರೇಂದ್ರ ಸೆಹ್ವಾಗ್ ದಾಖಲೆ ಪುಡಿಯಾಗೋ ಸಾಧ್ಯತೆ ಇದೆ.
 

Cricket Virat kohli can break virendra sehwag record in New zealand series

ನೇಪಿಯರ್(ಜ.21): ಪ್ರತಿ ಸರಣಿಯಲ್ಲಿ ದಾಖಲೆ ಪ್ರದರ್ಶನ ನೀಡುತ್ತಿರುವ ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಇದೀಗ ಮತ್ತೊಂದು ದಾಖಲೆ ಪುಡಿ ಮಾಡಲು ಸಜ್ಜಾಗಿದ್ದಾರೆ. ನ್ಯೂಜಿಲೆಂಡ್ ವಿರುದ್ಧದ ಏಕದಿನ ಸರಣಿಯಲ್ಲಿ ವಿರಾಟ್ ಕೊಹ್ಲಿ, ದಿಗ್ಗಜ ಕ್ರಿಕೆಟಿಗ ವಿರೇಂದ್ರ ಸೆಹ್ವಾಗ್ ದಾಖಲೆ ಪುಡಿ ಮಾಡೋ ವಿಶ್ವಾಸದಲ್ಲಿದ್ದಾರೆ.

ಇದನ್ನೂ ಓದಿ: ಇಲ್ಲಿದೆ ಭಾರತ-ನ್ಯೂಜಿಲೆಂಡ್ ಏಕದಿನ,ಟಿ20 ಸರಣಿ ವೇಳಾಪಟ್ಟಿ!

ನ್ಯೂಜಿಲೆಂಡ್ ವಿರುದ್ಧ ಗರಿಷ್ಠ ಶತಕ ಸಿಡಿಸಿ ಭಾರತೀಯ ಬ್ಯಾಟ್ಸ್‌ಮನ್‌ಗಳ ಬೈಕಿ ವಿರೇಂದ್ರ ಸೆಹ್ವಾಗ್ ಮೊದಲ ಸ್ಥಾನದಲ್ಲಿದ್ದಾರೆ. ಸೆಹ್ವಾಗ್ ನ್ಯೂಜಿಲೆಂಡ್ ವಿರುದ್ದ 6 ಶತಕ  ಭಾರಿಸಿದ್ದಾರೆ. ಇನ್ನು ಎರಡನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ ಹಾಗೂ ಮಾಸ್ಟರ್ ಬ್ಲಾಸ್ಟರ್ ಸಚಿನ್ ತೆಂಡೂಲ್ಕರ್ ತಲಾ 5 ಶತಕ ಸಿಡಿಸಿದ್ದಾರೆ. ಇದೀಗ ಸೆಹ್ವಾಗ್ ದಾಖಲೆ ಪುಡಿ ಮಾಡಲು ಕೊಹ್ಲಿ 2 ಸೆಂಚುರಿ ಅವಶ್ಯಕತೆ ಇದೆ.

ಇದನ್ನೂ ಓದಿ: ಟೀಂ ಇಂಡಿಯಾಗಿಂತ ಕಿವೀಸ್ ಬಲಿಷ್ಠವೇಕೆ..?

ನ್ಯೂಜಿಲೆಂಡ್ ವಿರುದ್ಧ ಗರಿಷ್ಠ ರನ್ ಸಿಡಿಸಿದ ಭಾರತೀಯರ ಪೈಕಿ ಸಚಿನ್ ತೆಂಡೂಲ್ಕರ್ ಮೊದಲ ಸ್ಥಾನದಲ್ಲಿದ್ದಾರೆ. ಸಚಿನ್ ಕಿವೀಸ್ ವಿರುದ್ಧ 1750 ರನ್ ಭಾರಿಸಿದ್ದಾರೆ. ದ್ವಿತೀಯ ಸ್ಥಾನದಲ್ಲಿರುವ ಸೆಹ್ವಾಗ್ 1,157 ರನ್ ಸಿಡಿಸಿದ್ದರೆ, 3ನೇ ಸ್ಥಾನದಲ್ಲಿರುವ ವಿರಾಟ್ ಕೊಹ್ಲಿ 1154 ರನ್ ಭಾರಿಸಿದ್ದಾರೆ. 

ಇದನ್ನೂ ಓದಿ: ವಿಶ್ವಕಪ್: ಸಚಿನ್ ತೆಂಡುಲ್ಕರ್ 4 ದಾಖಲೆ ಯಾವುತ್ತೂ ಪುಡಿಯಾಗಲ್ಲ!

ಆಸ್ಟ್ರೇಲಿಯಾ ಪ್ರವಾಸ ಮುಗಿಸಿದ ಟೀಂ ಇಂಡಿಯಾ ಇದೀಗ ನ್ಯೂಜಿಲೆಂಡ್‌ನಲ್ಲಿ ಬೀಡುಬಟ್ಟಿದೆ. 5 ಏಕದಿನ ಹಾಗೂ 3 ಟಿ20 ಸರಣಿಗಾಗಿ ಈಗಾಗಲೇ ನ್ಯೂಜಿಲೆಂಡ್‌ನಲ್ಲಿರುವ ಭಾರತ ತಂಡ ಅಭ್ಯಾಸ ಆರಂಭಿಸಿದೆ. ಜನವರಿ 23 ರಿಂದ ಏಕದಿನ ಸರಣಿ ಆರಂಭಗೊಳ್ಳಲಿದೆ.

Latest Videos
Follow Us:
Download App:
  • android
  • ios