ಇತ್ತೀಚೆಗಷ್ಟೇ ಕಾರ್ಯಕ್ರಮದ ಚಿತ್ರೀಕರಣ ನಡೆದಿದ್ದು, ಸದ್ಯದಲ್ಲೇ ಪ್ರಸಾರಗೊಳ್ಳಲಿದೆ. ಕಾರ್ಯಕ್ರಮದ ವೇಳೆ ತೆಗಿಸಿಕೊಂಡ ಫೋಟೋಗಳನ್ನು ರಾಹುಲ್ ಹಾಗೂ ಪಾಂಡ್ಯ ಟ್ವೀಟ್ ಮಾಡಿದ್ದು, ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿವೆ.
ಮುಂಬೈ[ನ.10]: ಸದಾ ಬಾಲಿವುಡ್ ತಾರೆಯರೇ ಕಾಣಿಸಿಕೊಳ್ಳುವ ಜನಪ್ರಿಯ ಟಾಕ್ ಶೋ, ಕಾಫಿ ವಿತ್ ಕರಣ್‌ನಲ್ಲಿ ಈ ಬಾರಿ ಕ್ರಿಕೆಟಿಗರಿಗೂ ಆಹ್ವಾನ ನೀಡಲಾಗಿದೆ. ಬಾಲಿವುಡ್ ನಿರ್ದೇಶಕ, ನಿರ್ಮಾಪಕ ಕರಣ್ ಜೋಹರ್ ನಡೆಸಿಕೊಡುವ ಕಾರ್ಯಕ್ರಮದಲ್ಲಿ ಭಾರತ ತಂಡದ ತಾರಾ ಆಟಗಾರರಾದ ಕೆ.ಎಲ್.ರಾಹುಲ್ ಹಾಗೂ ಹಾರ್ದಿಕ್ ಪಾಂಡ್ಯ ಕಾಣಿಸಿಕೊಂಡಿದ್ದಾರೆ.
ನೀವು ರಾಹುಲ್ ಮಾಡಿದ ಎಡವಟ್ಟು ಗಮನಿಸಿದ್ರಾ..?
ಇತ್ತೀಚೆಗಷ್ಟೇ ಕಾರ್ಯಕ್ರಮದ ಚಿತ್ರೀಕರಣ ನಡೆದಿದ್ದು, ಸದ್ಯದಲ್ಲೇ ಪ್ರಸಾರಗೊಳ್ಳಲಿದೆ. ಕಾರ್ಯಕ್ರಮದ ವೇಳೆ ತೆಗಿಸಿಕೊಂಡ ಫೋಟೋಗಳನ್ನು ರಾಹುಲ್ ಹಾಗೂ ಪಾಂಡ್ಯ ಟ್ವೀಟ್ ಮಾಡಿದ್ದು, ಸಾಮಾಜಿಕ ತಾಣಗಳಲ್ಲಿ ವೈರಲ್ ಆಗಿವೆ.
ಪಾಕ್ ವಿರುದ್ಧದ ಗೆಲುವಿನ ಬೆನ್ನಲ್ಲೇ ಟೀಂ ಇಂಡಿಯಾಗೆ ಶಾಕ್!
ಏಷ್ಯಾಕಪ್ ಟೂರ್ನಿಯ ವೇಳೆ ಗಾಯಗೊಂಡು ಟೀಂ ಇಂಡಿಯಾದಿಂದ ಹೊರಬಿದ್ದಿರುವ ಆಲ್ರೌಂಡರ್ ಹಾರ್ದಿಕ್ ಪಾಂಡ್ಯ ಆಸ್ಟ್ರೇಲಿಯಾ ಪ್ರವಾಸಕ್ಕೂ ಆಯ್ಕೆಯಾಗಿಲ್ಲ. ಪಾಕಿಸ್ತಾನ ವಿರುದ್ಧದ ಪಂದ್ಯದಲ್ಲಿ ಪಾಂಡ್ಯ ಗಾಯಗೊಂಡು ಹೊರಬಿದ್ದಿದ್ದರು. ಇನ್ನು ಕೆ.ಎಲ್ ರಾಹುಲ್ ಕೂಡಾ ಇತ್ತೀಚಿನ ದಿನಗಳಲ್ಲಿ ನೀರಸ ಪ್ರದರ್ಶನ ತೋರುವ ಮೂಲಕ ಟೀಂ ಇಂಡಿಯಾ ಅಭಿಮಾನಿಗಳ ಕೆಂಗಣ್ಣಿಗೆ ಗುರಿಯಾಗಿದ್ದಾರೆ.