ರಾಂಚಿ(ಜ): ಜ.12ರಿಂದ ಆರಂಭವಾಗಲಿರುವ ಆಸ್ಪ್ರೇಲಿಯಾ ವಿರುದ್ಧದ ಏಕದಿನ ಸರಣಿಗೆ ಭಾರತ ತಂಡವನ್ನು ಕೂಡಿಕೊಳ್ಳುವ ಸಿದ್ಧತೆಯಲ್ಲಿರುವ ಭಾರತ ತಂಡದ ಮಾಜಿ ನಾಯಕ ಎಂ.ಎಸ್‌.ಧೋನಿ, ತಮ್ಮ ಆರಾಧ್ಯ ದೇವತೆ ದಿಯೋರಿ ದೇವಿಗೆ ಪೂಜೆ ಸಲ್ಲಿಸಿ ಆಶೀರ್ವಾದ ಪಡೆದುಕೊಂಡಿದ್ದಾರೆ. 

 
 
 
 
 
 
 
 
 
 
 
 
 

Ahead of Australia Odi Series, MS Dhoni Seeks Blessings in Deori Mandir #MSDhoni #AUSvIND @mahi7781

A post shared by Dhoni Raina (@dhoniraina_team) on Jan 4, 2019 at 9:29pm PST

ಕಿವಿಸ್, ಆಸಿಸ್ ODIs,T20 ಸರಣಿಗೆ ಟೀಂ ಇಂಡಿಯಾ ಪ್ರಕಟ!

2018ರಲ್ಲಿ ಏಕದಿನ ಮತ್ತು ಟಿ20 ಸೇರಿ ಒಟ್ಟು 20 ಪಂದ್ಯಗಳನ್ನು ಆಡಿರುವ ಧೋನಿ, ಕೇವಲ 275 ರನ್‌ ಗಳಿಸಿದ್ದಾರೆ. ಇದರಿಂದಾಗಿ ಸಾರ್ವಜನಿಕ ವಲಯದಿಂದ ಟೀಕೆಗಳನ್ನು ಎದುರಿಸಿದ್ದರು. ವೆಸ್ಟ್‌ ಇಂಡೀಸ್‌ ಮತ್ತು ಆಸ್ಪ್ರೇಲಿಯಾ ವಿರುದ್ಧದ ಟಿ20 ಸರಣಿಯಿಂದ ಧೋನಿಯವನ್ನು ಹೊರಗಿಟ್ಟು, ರಿಷಭ್‌ ಪಂತ್‌ಗೆ ಅವಕಾಶ ನೀಡಲಾಗಿತ್ತು. ನ್ಯೂಜಿಲೆಂಡ್‌ ವಿರುದ್ಧದ ಟಿ20 ಸರಣಿಗೆ ಧೋನಿಗೆ ಮತ್ತೆ ಸ್ಥಾನ ನೀಡಲಾಗಿದೆ.

ಆಸ್ಟ್ರೇಲಿಯಾ ನೆಲದಲ್ಲಿ ಟೀಂ ಇಂಡಿಯಾ ದಿಗ್ವಿಜಯ; ಚೊಚ್ಚಲ ಸರಣಿ ಗೆದ್ದ ವಿರಾಟ್ ಪಡೆ

4 ಪಂದ್ಯಗಳ ಬಾರ್ಡರ್-ಗವಾಸ್ಕರ್ ಟೆಸ್ಟ್ ಸರಣಿಯಲ್ಲಿ ಟೀಂ ಇಂಡಿಯಾ 2-1ರಿಂದ ಟೆಸ್ಟ್ ಸರಣಿ ಗೆದ್ದು ಹೊಸ ಇತಿಹಾಸ ಬರೆದಿದೆ. ಇದೀಗ ಮೂರು ಪಂದ್ಯಗಳ ಏಕದಿನ ಸರಣಿ ಜನವರಿ 12ರಿಂದ ಆರಂಭವಾಗಲಿದ್ದು, ಮೊದಲ ಪಂದ್ಯ ಸಿಡ್ನಿ ಮೈದಾನದಲ್ಲಿ ನಡೆಯಲಿದೆ.

ನಾಳೆ ಭಾರತ್ ಬಂದ್ : ಶಾಲಾ-ಕಾಲೇಜುಗಳಿಗೆ ಇರುತ್ತಾ ರಜೆ..?