ಉತ್ತರಪ್ರದೇಶ(ಫೆ.12): ಕಾರು ಅಪಘಾತದಲ್ಲಿ ಟೀಂ ಇಂಡಿಯಾ ಕ್ರಿಕೆಟಿಗ ಸುರೇಶ್ ರೈನಾ ಸಾವನ್ನಪ್ಪಿದ್ದಾರೆ ಅನ್ನೋ ಸುಳ್ಳು ಸುದ್ದಿ ಕೆಲ ದಿನಗಳಿಂದ ಹರಿದಾಡುತ್ತಿದೆ. ಯುಟ್ಯೂಬ್ ಚಾನೆಲ್‌ಗಳಲ್ಲಿ ಈ ರೀತಿ ಸುದ್ದಿ ವೈರಲ್ ಆಗಿತ್ತು. ಈ ಸುಳ್ಳು ಸುದ್ದಿಯಿಂದ ಆಘಾತಕ್ಕೊಳಗಾಗಿದ್ದ ಅಭಿಮಾನಿಗೆ ಸ್ವತಃ ಸುರೇಶ್ ರೈನಾ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.

ಇದನ್ನೂ ಓದಿ: ಏಕದಿನ ವಿಶ್ವಕಪ್’ಗೆ ಭಜ್ಜಿ ಆಯ್ಕೆ ಮಾಡಿದ ಟೀಂ ಇಂಡಿಯಾವಿದು

ಕಳೆದ ಕೆಲ ದಿನಗಳಿಂದ ಕಾರು ಅಪಘಾತದಲ್ಲಿ ಸುರೇಶ್ ರೈನಾ ಸಾವನ್ನಪ್ಪಿದ್ದಾರೆ ಎಂದು ಸುಳ್ಳು ಸುದ್ದಿ ಹಬ್ಬಿಸುತ್ತಿದ್ದಾರೆ. ಇದರಿಂದ ನನ್ನ ಕುಟುಂಬ, ಗೆಳೆಯರು ಹಾಗೂ ಅಭಿಮಾನಿಗಳಿಗೆ ನೋವಾಗಿದೆ. ಈ ರೀತಿ ಸುಳ್ಳು ಸುದ್ದಿಯಿಂದ ದೂರವಿರಿ. ದೇವರ ಕೃಪೆಯಿಂದ ನಾನು ಆರೋಗ್ಯವಾಗಿದ್ದೇನೆ. ಸುಳ್ಳು ಸುದ್ದಿ ಹರಡಿದ ಯುಟ್ಯೂಬ್ ಚಾನೆಲ್ ವಿರುದ್ಧ ದೂರು ದಾಖಲಿಸಲಾಗಿದೆ ಎಂದು ರೈನಾ ಟ್ವೀಟ್ ಮಾಡಿದ್ದಾರೆ.

 

 

ಇದನ್ನೂ ಓದಿ: ರೋಹಿತ್’ಗೆ ರೆಸ್ಟ್; ಈ ಇಬ್ಬರಿಗೆ ವಿಶ್ವಕಪ್ ಎಂಟ್ರಿ ಕೊಡಲು ಕೊನೆಯ ಚಾನ್ಸ್..?

ಯುಟ್ಯೂಬ್ ಚಾನೆಲ್‌ನಲ್ಲಿ ರೈನಾ ಅಪಘಾತ ಸುದ್ದಿಯನ್ನ ಹರಡಲಾಗಿತ್ತು. ಇದು ಸಾಮಾಜಿಕ ಜಾಲತಾಣಗಳಲ್ಲಿ ಹರದಾಡುತ್ತಿತ್ತು. ಕುಟುಂಬ ಸದಸ್ಯರು ಹಾಗೂ ಆಪ್ತರು ಈ ಕುರಿತು ರೈನಾಗೆ ಮಾಹಿತಿ ತಿಳಿಸಿದ್ದಾರೆ. ತಕ್ಷಣವೇ ರೈನಾ ಟ್ವೀಟ್ ಮೂಲಕ ಉತ್ತರಿಸಿದ್ದಾರೆ.