ತಮ್ಮ ಆಲ್ರೌಂಡ್ ಪ್ರದರ್ಶನದ ಮೂಲಕ 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಎಡಗೈ ಕ್ರಿಕೆಟಿಗ ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದರು.
ನವದೆಹಲಿ[ಡಿ.12]: ಟೀಂ ಇಂಡಿಯಾ, ಕ್ರಿಕೆಟ್ ಜಗತ್ತಿಗೆ ಪರಿಚಯಿಸಿದ ಅತ್ಯಂತ ಯಶಸ್ವಿ ಆಲ್ರೌಂಡರ್, 2011ರ ಏಕದಿನ ವಿಶ್ವಕಪ್ ಹೀರೋ ಯುವರಾಜ್ ಸಿಂಗ್ ಇಂದು 37ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಯುವಿಗೆ ಪತ್ನಿ ಹ್ಯಾಜಲ್ ಕೀಚ್, ಸ್ನೇಹಿತ ಜಹೀರ್ ಖಾನ್ ಪತ್ನಿ ಸಾಗರಿಕ ಘಾಟ್ಗೆ ಮುಂತಾದವರು ಸಾಥ್ ನೀಡಿದ್ದಾರೆ.
2000ನೇ ಇಸವಿಯಲ್ಲಿ ಸೌರವ್ ಗಂಗೂಲಿ ನಾಯಕತ್ವದಲ್ಲಿ ಟೀಂ ಇಂಡಿಯಾಗೆ ಪದಾರ್ಪಣೆ ಮಾಡಿದ ಯುವರಾಜ್ ಸಿಂಗ್ 304 ಏಕದಿನ, 40 ಟೆಸ್ಟ್ ಹಾಗೂ 58 ಟಿ20 ಪಂದ್ಯಗಳಲ್ಲಿ ಭಾರತ ತಂಡವನ್ನು ಪ್ರತಿನಿಧಿಸಿದ್ದು, 11,778 ರನ್ ಹಾಗೂ 148 ವಿಕೆಟ್’ಗಳನ್ನು ಕಬಳಿಸಿದ್ದಾರೆ. 2007ರ ಟಿ20 ವಿಶ್ವಕಪ್ ಹಾಗೂ 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಭಾರತ ಚಾಂಪಿಯನ್ ಆಗಲು ಪ್ರಮುಖ ಪಾತ್ರವಹಿಸಿದ್ದರು.
ತಮ್ಮ ಆಲ್ರೌಂಡ್ ಪ್ರದರ್ಶನದ ಮೂಲಕ 2011ರ ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಎಡಗೈ ಕ್ರಿಕೆಟಿಗ ಸರಣಿ ಶ್ರೇಷ್ಠ ಗೌರವಕ್ಕೆ ಭಾಜನರಾಗಿದ್ದರು. ಇನ್ನು 2007ರ ಟಿ20 ವಿಶ್ವಕಪ್’ನಲ್ಲಿ ಇಂಗ್ಲೆಂಡ್ ವಿರುದ್ಧ ಸತತ ಆರು ಸಿಕ್ಸರ್ ಸಿಡಿಸುವ ಮೂಲಕ ಕೇವಲ 12 ಎಸೆತಗಳಲ್ಲಿ ಅರ್ಧಶತಕ ಬಾರಿಸುವುದರೊಂದಿಗೆ ಅಂತರಾಷ್ಟ್ರೀಯ ಕ್ರಿಕೆಟ್’ನಲ್ಲಿ ಅತಿವೇಗವಾಗಿ 50 ರನ್ ಬಾರಿಸಿದ ಬ್ಯಾಟ್ಸ್’ಮನ್ ಎನ್ನುವ ದಾಖಲೆ ಯುವಿ ಹೆಸರಿನಲ್ಲಿಯೇ ಇದೆ.
ತಮ್ಮ ಅದ್ಭುತ ಪ್ರದರ್ಶನದ ಮೂಲಕ ಹಲವಾರು ಪಂದ್ಯಗಳನ್ನು ಗೆಲ್ಲಿಸಿಕೊಟ್ಟ ಯುವರಾಜ್ ಸಿಂಗ್’ಗೆ ಸುವರ್ಣನ್ಯೂಸ್.ಕಾಂನಿಂದ ಮತ್ತೊಮ್ಮೆ ಹುಟ್ಟುಹಬ್ಬದ ಶುಭಾಶಯಗಳು..
ಯುವಿ ಹುಟ್ಟುಹಬ್ಬದ ಸಂಭ್ರಮಾಚರಣೆಯನ್ನು ಕೆಲವು ಚಿತ್ರಗಳು ನಿಮಗಾಗಿ...
