ತಮ್ಮ ಸ್ಫೋಟಕ ಬ್ಯಾಟಿಂಗ್, ಅತ್ಯಾಕರ್ಷಕ ಫೀಲ್ಡಿಂಗ್ ಮೂಲಕ ಭಾರತೀಯ ಅಭಿಮಾನಿಗಳ ಮನಗೆದ್ದಿರುವ ಯುವಿ ಮೈದಾನದಾಚೆಗೂ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. 

ನವದೆಹಲಿ[ಡಿ.12]: ಟೀಂ ಇಂಡಿಯಾದ ಸಾರ್ವಕಾಲಿಕ ಶ್ರೇಷ್ಠ ಆಲ್ರೌಂಡರ್ ಯುವರಾಜ್ ಸಿಂಗ್ ಇಂದು 37ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಯುವಿಗೆ ಶುಭಾಶಯಗಳ ಮಹಾಪೂರವೇ ಹರಿದು ಬರುತ್ತಿದೆ.

ತಮ್ಮ ಸ್ಫೋಟಕ ಬ್ಯಾಟಿಂಗ್, ಅತ್ಯಾಕರ್ಷಕ ಫೀಲ್ಡಿಂಗ್ ಮೂಲಕ ಭಾರತೀಯ ಅಭಿಮಾನಿಗಳ ಮನಗೆದ್ದಿರುವ ಯುವಿ ಮೈದಾನದಾಚೆಗೂ ಸಾಮಾಜಿಕ ಕಾರ್ಯಗಳನ್ನು ಮಾಡುವ ಮೂಲಕ ರಿಯಲ್ ಹೀರೋ ಎನಿಸಿಕೊಂಡಿದ್ದಾರೆ. ಭಾರತ ತಂಡ 2011ರ ಏಕದಿನ ವಿಶ್ವಕಪ್ ಗೆಲ್ಲುವಲ್ಲಿ ಯುವಿ ಪ್ರಮುಖ ಪಾತ್ರವಹಿಸಿದ್ದರು. ಇದಾದ ಬಳಿಕ 2012ರಲ್ಲಿ ಶ್ವಾಸಕೋಶ ಕ್ಯಾನ್ಸರ್’ಗೆ ತುತ್ತಾಗಿ ಸಾವಿನೊಂದಿಗೆ ಸೆಣಸಿ ಮತ್ತೆ ಟೀಂ ಇಂಡಿಯಾಗೆ ಕಮ್’ಬ್ಯಾಕ್ ಮಾಡಿದ್ದೇ ಒಂದು ರೋಚಕ ಉದಾಹರಣೆ.

ವಿಶ್ವಕಪ್ ಹೀರೋ, ಕ್ಯಾನ್ಸರ್ ಗೆದ್ದ ಯುವಿ ಹುಟ್ಟುಹಬ್ಬವಿಂದು..

ತಮ್ಮ ಹುಟ್ಟುಹಬ್ಬದ ಸಂಭ್ರಮದಲ್ಲಿ ಯುವರಾಜ್ ಸಿಂಗ್ ಕ್ಯಾನ್ಸರ್’ಗೆ ತುತ್ತಾಗಿರುವ ಅತ್ಯಂತ ಕಡುಬಡತನದಲ್ಲಿರುವ 25 ಮಕ್ಕಳಿಗೆ ಚಿಕಿತ್ಸೆಗೆ ಸಹಾಯ ಮಾಡಲು ಮುಂದಾಗಿದ್ದಾರೆ. ತಮ್ಮ YouWeCan ಫೌಂಡೇಶನ್ ಮೂಲಕ 25 ಮಕ್ಕಳಿಗೆ ಸಹಾಯಹಸ್ತ ಒದಗಿಸಲು ಅಭಿಮಾನಿಗಳಲ್ಲೂ ಮನವಿ ಮಾಡಿಕೊಂಡಿದ್ದಾರೆ.

ಯುವಿಯ ಮಾತಿಗೆ ಒಮ್ಮೆ ಕಿವಿಗೊಡಿ....

Scroll to load tweet…