ವಿಶಾಖಪಟ್ಟಣಂ(ಅ.03): ಸೌತ್ ಆಫ್ರಿಕಾ ವಿರುದ್ದದ ಮೊದಲ ಟೆಸ್ಟ್ ಪಂದ್ಯದಲ್ಲಿ ಕನ್ನಡಿಗ ಮಯಾಂಕ್ ಅಗರ್ವಾಲ್ ಚೊಚ್ಚಲ ದ್ವಿಶತಕ ಸಿಡಿಸಿ ಅಬ್ಬರಿಸಿದ್ದಾರೆ. 5ನೇ ಟೆಸ್ಟ್ ಪಂದ್ಯದಲ್ಲಿ ದಾಖಲೆಯ ಡಬಲ್ ಸೆಂಚುರಿ ಸಿಡಿಸಿ ಭಾರತದ ಆರಂಭಿಕರ ಸಮಸ್ಯೆಗೆ ಮುಕ್ತಿ ಹಾಡಿದ್ದಾರೆ.  

 

ಇದನ್ನೂ ಓದಿ: ವೈಜಾಗ್ ಟೆಸ್ಟ್: ದ್ವಿಶತಕ ಚಚ್ಚಿದ ಮಯಾಂಕ್ ಅಗರ್‌ವಾಲ್

ಸಿಡ್ನಿಯಲ್ಲಿ ಆಸ್ಟ್ರೇಲಿಯಾ ವಿರುದ್ದ ಸಿಡಿಸಿದ 77 ರನ್ ಮಯಾಂಕ್ ಇದುವರೆಗೆ ಬೆಸ್ಟ್ ಸ್ಕೋರ್ ಆಗಿತ್ತು. ಇದೀಗ 215 ಸಿಡಿಸಿದ ಮಾಯಂಕ್ ದಾಖಲೆ ಬೆಸ್ಟ್ ಸ್ಕೋರ್ ಗಳಿಸಿದ್ದಾರೆ. ಮಯಾಂಕ್ ಚೊಚ್ಚಲ ಡಬಲ್ ಸೆಂಚುರಿ ಸಾಧನೆಯನ್ನು ಕ್ರಿಕೆಟ್ ದಿಗ್ಗಜರು ಕೊಂಡಾಡಿದ್ದಾರೆ. ಟ್ವಿಟರ್ ಮೂಲಕ ಪ್ರಶಂಸೆ ವ್ಯಕ್ತಪಡಿಸಿದ್ದಾರೆ.