ಹಾಶೀಂ ಆಮ್ಲಾ ಹಾಗೂ ಜೋಸ್ ಬಟ್ಲರ್ ಬ್ಯಾಟಿಂಗ್ ಬಗ್ಗೆ ಕ್ರಿಕೆಟ್ ದಿಗ್ಗಜರು ಪ್ರತಿಕ್ರಿಯಿಸಿದ್ದು ಹೀಗೆ...
ಇಂದೋರ್(ಏ.21): ಹತ್ತನೇ ಆವೃತ್ತಿಯ ಐಪಿಎಲ್ ಟೂರ್ನಿಯು ದಿನದಿಂದ ದಿನಕ್ಕೆ ಕಿಚ್ಚು ಜೋರಾಗುತ್ತಿದ್ದು, ಗುರುವಾರ ಕಿಂಗ್ಸ್ ಇಲೆವನ್ ಪಂಜಾಬ್ ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಪಂದ್ಯ ಅದ್ಭುತ ಹೋರಾಟಕ್ಕೆ ಸಾಕ್ಷಿಯಾಯಿತು.
ಕಿಂಗ್ಸ್ ಇಲೆವನ್ ಪಂಜಾಬ್ ಪರ ಹಾಶೀಂ ಆಮ್ಲಾ ಐಪಿಎಲ್'ನಲ್ಲಿ ಚೊಚ್ಚಲ ಶತಕ ಸಿಡಿಸಿ ಸಂಭ್ರಮಿಸಿದರೆ, ಬೃಹತ್ ಮೊತ್ತದ ಗುರಿಯನ್ನು ಮೂರು ಓವರ್ ಬಾಕಿಯಿರುವಂತೆ ಮುಂಬೈ ಜಯಭೇರಿ ಬಾರಿಸಲು ನೆರವಾದ ಜೋಸ್ ಬಟ್ಲರ್ ಸ್ಫೋಟಕ ಬ್ಯಾಟಿಂಗ್ ಕೂಡಾ ಪ್ರೇಕ್ಷಕರ ಮನಸೂರೆಗೊಳ್ಳುವಲ್ಲಿ ಯಶಸ್ವಿಯಾಯಿತು.
ಕಿಂಗ್ಸ್ ಇಲೆವನ್ ಪಂಜಾಬ್ ನಿಗದಿತ 20 ಓವರ್'ಗಳಲ್ಲಿ ಹಾಶೀಂ ಆಮ್ಲಾ ಶತಕದ ನೆರವಿನಿಂದ 198ರನ್ ಕಲೆಹಾಕಿತು. ಇದಕ್ಕುತ್ತರವಾಗಿ ಮುಂಬೈ ಇಂಡಿಯನ್ಸ್ 15.3 ಓವರ್'ಗಳಲ್ಲಿ ಕೇವಲ ಎರಡು ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.
ಹಾಶೀಂ ಆಮ್ಲಾ ಹಾಗೂ ಜೋಸ್ ಬಟ್ಲರ್ ಬ್ಯಾಟಿಂಗ್ ಬಗ್ಗೆ ಕ್ರಿಕೆಟ್ ದಿಗ್ಗಜರು ಪ್ರತಿಕ್ರಿಯಿಸಿದ್ದು ಹೀಗೆ...
