ಬೆಂಗಳೂರು[ಆ.04]: ಭಾರತ-ಇಂಗ್ಲೆಂಡ್ ನಡುವಿನ ಐತಿಹಾಸಿಕ ಟೆಸ್ಟ್ ಪಂದ್ಯದಲ್ಲಿ ಇಂಗ್ಲೆಂಡ್ 31 ರನ್’ಗಳಿಂದ ರೋಚಕ ಜಯ ಸಾಧಿಸಿದೆ. ನಾಲ್ಕನೇ ದಿನವಾದ ಇಂದು ಟೀಂ ಇಂಡಿಯಾ ಗೆಲ್ಲಲು ಕೇವಲ 84 ರನ್’ಗಳ ಅವಶ್ಯಕತೆಯಿತ್ತು. ಆದರೆ ಬೆನ್ ಸ್ಟೋಕ್ಸ್ ಮಾರಕ ದಾಳಿಗೆ ತತ್ತರಿಸಿದ ಟೀಂ ಇಂಡಿಯಾ ಕೇವಲ 52 ರನ್’ಗಳಿಸಲಷ್ಟೇ ಶಕ್ತವಾಯಿತು. ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹಾಗೂ ಕೊನೆಯಲ್ಲಿ ಹಾರ್ದಿಕ್ ಪಾಂಡ್ಯ ಹೊರತುಪಡಿಸಿ ಉಳಿದ ಯಾವ ಬ್ಯಾಟ್ಸ್’ಮನ್’ಗಳಿಂದಲೂ ನಿರೀಕ್ಷಿತ ಪ್ರದರ್ಶನ ಮೂಡಿಬರಲಿಲ್ಲ.  

ಎಡ್ಜ್’ಬಾಸ್ಟನ್ ಟೆಸ್ಟ್’ನಲ್ಲಿ ಟೀಂ ಇಂಡಿಯಾ ಗೆಲುವಿನ ಕನಸು ಕನಸಾಗಿಯೇ ಉಳಿದಿದೆ. ಇದೀಗ 5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಇಂಗ್ಲೆಂಡ್ 1-0 ಮುನ್ನಡೆ ಸಾಧಿಸಿದೆ. ಇನ್ನು ಎರಡನೇ ಟೆಸ್ಟ್ ಪಂದ್ಯ ಆಗಸ್ಟ್ 09ರಿಂದ ಲಾರ್ಡ್ಸ್’ನಲ್ಲಿ ಆರಂಭವಾಗಲಿದೆ. ಮೊದಲ ಟೆಸ್ಟ್ ಬಗ್ಗೆ ದಿಗ್ಗಜ ಕ್ರಿಕೆಟಿಗರು ಪ್ರತಿಕ್ರಿಯಿಸಿದ್ದು ಹೀಗೆ...