ನವದೆಹಲಿ[ಏ.11]: ಚೆನ್ನೈ ಸೂಪರ್ ಕಿಂಗ್ಸ್ ತಂಡದ ವೇಗಿ ದೀಪಕ್ ಚಾಹರ್ ಐಪಿಎಲ್‌ನಲ್ಲಿ ಹೀಗೂ ಒಂದು ಹೊಸ ಇತಿಹಾಸ ಬರೆದಿದ್ದಾರೆ. ಐಪಿಎಲ್ ಇತಿಹಾಸದಲ್ಲಿಯೇ ಇನಿಂಗ್ಸ್‌ವೊಂದರಲ್ಲಿ ಅತಿ ಹೆಚ್ಚು ಡಾಟ್ ಬಾಲ್ ಹಾಕುವ ಮೂಲಕ ಈ ದಾಖಲೆ ಮಾಡಿದ್ದಾರೆ.

ಮಂಗಳವಾರ ನಡೆದ ಕೋಲ್ಕತಾ ವಿರುದ್ಧದ ಪಂದ್ಯದಲ್ಲಿ ದೀಪಕ್ ಚಾಹರ್ 20 ರನ್ ನೀಡಿ ಮೂರು ವಿಕೆಟ್ ಗಳಿಸುವುದರ ಜೊತೆಗೆ 20 ಡಾಟ್ ಬಾಲ್‌ಗಳನ್ನು ಹಾಕಿ ಇಂಥದ್ದೊಂದು ಅಪರೂಪದ ದಾಖಲೆ ಬರೆದಿದ್ದಾರೆ. 

ಸೋತರೂ ಡೆಲ್ಲಿ ಜತೆಗೆ ನಂ.1 ಸ್ಥಾನ ಹಂಚಿಕೊಂಡ RCB..!

ಈ ಹಿಂದೆ 2009ರಲ್ಲಿ ಪಂಜಾಬ್ ವಿರುದ್ಧ ಡೆಲ್ಲಿ ಡೇರ್ ಡೆವಿಲ್ಸ್ ತಂಡದ ಆಶಿಶ್ ನೆಹ್ರಾ ಹಾಗೂ ಕೋಲ್ಕತಾ ನೈಟ್’ರೈಡರ್ಸ್ ವಿರುದ್ಧ ರಾಜಸ್ಥಾನ ರಾಯಲ್ಸ್ ವಿರುದ್ಧ 19 ಚುಕ್ಕೆ ಎಸೆತಗಳನ್ನು ಹಾಕಿದ್ದರು. ಇದೀಗ 10 ವರ್ಷಗಳ ಬಳಿಕ ಆ ದಾಖಲೆಯನ್ನು ದೀಪಕ್ ಅಳಿಸಿಹಾಕಿದ್ದಾರೆ.

ಮತದಾನ ನಮ್ಮ ಹಕ್ಕು... ಪ್ರಜಾಪ್ರಭುತ್ವದ ಉತ್ಸವವನ್ನು ಯಶಸ್ವಿಗೊಳಿಸೋಣ...

ದೇಶದಲ್ಲಿ ಏ.11 ರಿಂದ ಮೇ 19ರವರೆಗೆ ಏಳು ಹಂತಗಳಲ್ಲಿ ಮತದಾನ. ಕರ್ನಾಟಕದಲ್ಲಿ ಏ.18 ಹಾಗೂ ಏ.23ರಂದು ಎರಡು ಹಂತಗಳಲ್ಲಿ ಮತದಾನ. ಭಾರತದಲ್ಲಿ 543 ಲೋಕಸಭಾ ಕ್ಷೇತ್ರ, ಕರ್ನಾಟಕದಲ್ಲಿ 28.