ಕೆಲ ದಿನಗಳ ಹಿಂದಷ್ಟೇ ಪರ್ತ್‌ನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಸ್ಟೇನ್ ಭುಜದ ನೋವಿಗೆ ತುತ್ತಾಗಿದ್ದರು.

ಜೋಹಾನ್ಸ್'ಬರ್ಗ್(ನ.14): ಮುಂದಿನ ವರ್ಷ ಮೇ ತಿಂಗಳಲ್ಲಿ ನಡೆಯುವ ಇಂಗ್ಲೆಂಡ್ ವಿರುದ್ಧದ ಸರಣಿ ವೇಳೆಗೆ ಅಂತಾರಾಷ್ಟ್ರೀಯ ಕ್ರಿಕೆಟ್‌ಗೆ ಮರಳುವ ವಿಶ್ವಾಸವಿದೆ ಎಂದು ದಕ್ಷಿಣ ಆಫ್ರಿಕಾದ ವೇಗದ ಬೌಲರ್ ಡೇಲ್ ಸ್ಟೇನ್ ಹೇಳಿದ್ದಾರೆ.

Add Asianetnews Kannada as a Preferred SourcegooglePreferred

ಕೆಲ ದಿನಗಳ ಹಿಂದಷ್ಟೇ ಪರ್ತ್‌ನಲ್ಲಿ ನಡೆದಿದ್ದ ಆಸ್ಟ್ರೇಲಿಯಾ ವಿರುದ್ಧದ ಮೊದಲ ಟೆಸ್ಟ್ ಪಂದ್ಯದ ವೇಳೆ ಸ್ಟೇನ್ ಭುಜದ ನೋವಿಗೆ ತುತ್ತಾಗಿದ್ದರು. ಚಿಕಿತ್ಸೆ ಬಳಿಕ ಸ್ಟೇನ್ ಭುಜದ ಮೂಳೆಯಲ್ಲಿ ಬಿರುಕು ಕಾಣಿಸಿಕೊಂಡಿರುವುದು ಪತ್ತೆಯಾಗಿದ್ದರಿಂದ ವಿಶ್ರಾಂತಿ ನೀಡಲಾಗಿದೆ.

33 ವರ್ಷ ವಯಸ್ಸಿನ ಸ್ಟೇನ್, ಮುಂಬರುವ ಶ್ರೀಲಂಕಾ ಪ್ರವಾಸ ಮತ್ತು ಫೆಬ್ರವರಿಯಲ್ಲಿ ನಡೆಯುವ ನ್ಯೂಜಿಲೆಂಡ್ ಸರಣಿಯಿಂದ ವಂಚಿತರಾಗುವ ಸಾಧ್ಯತೆಯಿದೆ ಎನ್ನಲಾಗುತ್ತಿದೆ.