ಗುಂಡಿಬಿದ್ದ ಟ್ರ್ಯಾಕ್‌ನಲ್ಲಿ ದಸರಾ ಕೂಟ!
ಬೆಂಗಳೂರು ನಗರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ನಗರದ ಹೃದಯಭಾಗದಲ್ಲಿರುವ ಕಂಠೀರವ ಕ್ರೀಡಾಂಗಣದಲ್ಲಿ ನಡೆಯಲಿದೆ. ಗುಂಡಿಬಿದ್ದ ಸಿಂಥೆಟಿಕ್ ಟ್ರ್ಯಾಕ್‌ನಲ್ಲೇ ಕ್ರೀಡಾಪಟುಗಳು ಸ್ಪರ್ಧಿಸಬೇಕಿದೆ. ಈ ಕುರಿತಾದ ವರದಿ ಇಲ್ಲಿದೆ ನೋಡಿ...
ಬೆಂಗಳೂರು(ಸೆ.19): ಕಂಠೀರವ ಕ್ರೀಡಾಂಗಣದಲ್ಲಿನ ಗುಂಡಿಬಿದ್ದ ಸಿಂಥೆಟಿಕ್ ಟ್ರ್ಯಾಕ್‌ನಲ್ಲಿ ರಾಜ್ಯ ಕ್ರೀಡಾ ಇಲಾಖೆ ಗುರುವಾರದಿಂದ 2 ದಿನಗಳ ಕಾಲ ಬೆಂಗಳೂರು ನಗರ ವಿಭಾಗ ಮಟ್ಟದ ದಸರಾ ಕ್ರೀಡಾಕೂಟ ನಡೆಸುತ್ತಿದೆ. ಇದು ಮೈಸೂರು ದಸರಾ ಕ್ರೀಡಾಕೂಟದ ಆಯ್ಕೆ ಟ್ರಯಲ್ಸ್.
ಬೆಂಗಳೂರಿನಿಂದ ರಾಷ್ಟ್ರೀಯ ಅಥ್ಲೆಟಿಕ್ಸ್ ರಾಂಚಿಗೆ ಎತ್ತಂಗಡಿ..!
ಅಲ್ಲಲ್ಲಿ ಕಿತ್ತು ಹೋಗಿರುವ ಟ್ರ್ಯಾಕ್‌ಗೆ ಕೆಲ ತಿಂಗಳ ಹಿಂದಷ್ಟೇ ಕ್ರೀಡಾಂಗಣದ ಸಿಬ್ಬಂದಿ ತೇಪೆ ಹಾಕಿದ್ದರು. ಇದೀಗ ಅದೂ ಹಾಳಾಗಿದೆ. ಟ್ರ್ಯಾಕ್‌ನಲ್ಲಿ ದೊಡ್ಡ ಗುಂಡಿಗಳಿದ್ದರೂ, ಅದನ್ನೇ ಬಳಸುತ್ತಿರುವುದು ಕ್ರೀಡಾ ಇಲಾಖೆಯ ದುಸ್ಥಿತಿಯನ್ನು ತೋರಿಸುತ್ತಿದೆ. ಈ ಟ್ರ್ಯಾಕ್‌ನಲ್ಲಿ ಓಡುವಾಗ ಅಥ್ಲೀಟ್‌ಗಳಿಗೆ ಗಾಯವಾದರೆ ಇಲಾಖೆಯ ಹೊಣೆಯಾಗಬೇಕಾದ ಪರಿಸ್ಥಿತಿ ಇದೆ. ಬೆಂಗಳೂರಲ್ಲಿ ಕಂಠೀರವ ಕ್ರೀಡಾಂಗಣ ಹೊರತುಪಡಿಸಿ ಉಳಿದೆಲ್ಲೂ ಸಿಂಥೆಟಿಕ್ ಟ್ರ್ಯಾಕ್ ಇಲ್ಲವೇ ಎನ್ನುವ ಪ್ರಶ್ನೆಗೆ ಈ ಕೂಟ ದಾರಿ ಮಾಡಿಕೊಟ್ಟಿದೆ.
ಸಿಂಥೆಟಿಕ್ ಟ್ರ್ಯಾಕ್ ಹಾಗೂ ಕಂಠೀರವ ಕ್ರೀಡಾಂಗಣದ ಮೂಲಭೂತ ಸಮಸ್ಯೆಗಳ ಬಗ್ಗೆ ಸುವರ್ಣ ನ್ಯೂಸ್.ಕಾಂ ಸಹೋದರ ಸಂಸ್ಥೆಯಾದ ‘ಕನ್ನಡಪ್ರಭ’ ಇತ್ತೀಚೆಗಷ್ಟೇ ಸರಣಿ ವರದಿ ಪ್ರಕಟಿಸಿ ರಾಜ್ಯ ಸರ್ಕಾರದ ಗಮನಕ್ಕೆ ತಂದಿತ್ತು. ಆ ಸಮಯದಲ್ಲಿ ಎಚ್ಚೆತ್ತುಕೊಂಡಿದ್ದ ಅಧಿಕಾರಿಗಳು ಮೂಲಭೂತ ಸೌಕರ್ಯಗಳನ್ನು ತಿಂಗಳಲ್ಲಿ ಸರಿಪಡಿಸಿದ್ದರು. ಆದರೆ ಟ್ರ್ಯಾಕ್ ಮರು ಅಳವಡಿಕೆಗೆ ಹೆಚ್ಚಿನ ಸಮಯ ತೆಗೆದುಕೊಳ್ಳಲಾಗುತ್ತಿದೆ. ಟೆಂಡರ್ ಮೊತ್ತ ನಿರೀಕ್ಷಿಗಿಂತ ಹೆಚ್ಚಾಗಲಿದೆ ಎಂದು ಅಂದಾಜಿಸಲಾಗಿದ್ದು, ಸರ್ಕಾರದ ಗಮನಕ್ಕೆ ತಂದಿದ್ದೇವೆ ಎಂದು ಇಲಾಖೆ ಅಧಿಕಾರಿ ‘ಕನ್ನಡಪ್ರಭ’ಕ್ಕೆ ತಿಳಿಸಿದ್ದಾರೆ.