ನಿಷೇಧದ ಬಳಿಕ ಮೊದಲ ಪಂದ್ಯ-1 ರನ್ ಗಳಿಸಿ ವಾರ್ನರ್ ಔಟ್

David Warner bowled by Lasith Malinga for one on return to cricket
Highlights

ಚೆಂಡು ವಿರೂಪಗೊಳಿಸಿ ನಿಷೇಧಕ್ಕೊಳಗಾಗಿರುವ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಕಮ್‌ಬ್ಯಾಕ್ ಪಂದ್ಯದಲ್ಲೇ ನಿರಾಸೆ ಅನುಭವಿಸಿದ್ದಾರೆ. ವಾರ್ನರ್ ಸ್ಫೋಟಕ ಬ್ಯಾಟಿಂಗ್‌ಗೆ ಬ್ರೇಕ್ ಹಾಕಿದ್ದು ಯಾರು? ಇಲ್ಲಿದೆ ವಿವರ.

ಟೊರೊಂಟೋ(ಜು.01): ಬಾಲ್ ಟ್ಯಾಂಪರಿಂಗ್‌ನಿಂದಾಗಿ ಒಂದು ವರ್ಷ ನಿಷೇಧ ಅನುಭವಿಸಿರುವ ಆಸ್ಟ್ರೇಲಿಯಾ ಬ್ಯಾಟ್ಸ್‌ಮನ್ ಡೇವಿಡ್ ವಾರ್ನರ್ ಇದೀಗ ಕ್ರಿಕೆಟ್‌ಗೆ ಮರಳಿದ್ದಾರೆ. ಕೆನಾಡದ ಗ್ಲೋಬಲ್ ಟಿ20 ಲೀಗ್ ಟೂರ್ನಿಯಲ್ಲಿ ಆಡೋ ಮೂಲಕ ವಾರ್ನರ್ ಸ್ಪರ್ಧಾತ್ಮಕ ಕ್ರಿಕೆಟ್‌ಗೆ ಮರಳಿದ್ದಾರೆ.

ಕೆನಾಡ ಗ್ಲೋಬಲ್ ಟಿ20 ಲೀಗ್ ಟೂರ್ನಿಯಲ್ಲಿ  ವಿನ್ನಿಪೆಗ್‌ ಹಾಕ್ಸ್‌ ತಂಡದ ಪರ ಕಣಕ್ಕಿಳಿದ ಡೇವಿಡ್ ವಾರ್ನರ್ ಕೇವಲ 1 ರನ್ ಗಳಿಸಿ ಔಟಾದರು. ಮಾಂಟ್ರಿಯಲ್ ಟೈಗರ್ಸ್ ತಂಡದ ಲಸಿತ್ ಮಲಿಂಗ ಎಸೆತದಲ್ಲಿ ಬೌಲ್ಡ್ ಆದ ವಾರ್ನರ್ ಕಮ್‌ಬ್ಯಾಕ್ ಪಂದ್ಯದಲ್ಲೇ ನಿರಾಸೆ ಅನುಭವಿಸಿದರು.

ಸೌತ್ಆಫ್ರಿಕಾ ವಿರುದ್ಧದ ಟೆಸ್ಟ್ ಪಂದ್ಯದಲ್ಲಿ ಚೆಂಡು ವಿರೂಪಗೊಳಿಸಿದ ಡೇವಿಡ್ ವಾರ್ನರ್, ನಾಯಕ ಸ್ಟೀವ್ ಸ್ಮಿತ್ ಹಾಗೂ ಕ್ಯಾಮರೂನ್ ಬೆನ್‌ಕ್ರಾಫ್ಟ್ ನಿಷೇಧದ ಶಿಕ್ಷೆ ಅನುಭವಿಸುತ್ತಿದ್ದಾರೆ.

loader