ಬೌಲಿಂಗ್ ವಿಭಾಗದಲ್ಲಿ ಭಾರತದ ಯುವ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಒಂದು ಸ್ಥಾನ ಕುಸಿತ ಕಂಡಿದ್ದು 6ನೇ ಸ್ಥಾನ ಪಡೆದಿದ್ದಾರೆ. ಪಾಕಿಸ್ತಾನದ ವೇಗದ ಬೌಲರ್ ಹಸನ್ ಅಲಿ 743 ಅಂಕಗಳಿಂದ ಮೊದಲ ಬಾರಿಗೆ ನಂ.1 ಸ್ಥಾನ ಪಡೆದಿದ್ದಾರೆ.

ದುಬೈ(ಅ.20): ಐಸಿಸಿ ಬಿಡುಗಡೆ ಮಾಡಿದ ನೂತನ ಏಕದಿನ ಶ್ರೇಯಾಂಕ ಪಟ್ಟಿಯಲ್ಲಿ ವಿರಾಟ್ ಕೊಹ್ಲಿಯನ್ನು ಹಿಂದಿಕ್ಕಿದ ಎಬಿ ಡಿವಿಲಿಯರ್ಸ್ ಅಗ್ರಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ. ಹಾಗೆಯೇ ಬೌಲಿಂಗ್ ವಿಭಾಗದಲ್ಲಿ ಪಾಕಿಸ್ತಾನದ ಹಸನ್ ಅಲಿ ಇದೇ ಮೊದಲ ಬಾರಿಗೆ ನಂ.1 ಸ್ಥಾನಕ್ಕೇರಿದ್ದಾರೆ.

ನೂತನವಾಗಿ ಬಿಡುಗಡೆಯಾದ ಶ್ರೇಯಾಂಕ ಪಟ್ಟಿಯಲ್ಲಿ ಬ್ಯಾಟಿಂಗ್ ವಿಭಾಗದಲ್ಲಿ ಕೊಹ್ಲಿ 877 ಅಂಕಗಳೊಂದಿಗೆ 2ನೇ ಸ್ಥಾನ ಪಡೆದಿದ್ದಾರೆ. ಬಾಂಗ್ಲಾದೇಶ ವಿರುದ್ಧದ ಏಕದಿನ ಪಂದ್ಯದಲ್ಲಿ ಭರ್ಜರಿ ಶತಕ ಸಿಡಿಸಿದ್ದ ದ.ಆಫ್ರಿಕಾದ ಎಬಿ ಡಿವಿಲಿಯರ್ಸ್‌ 879 ಅಂಕಗಳೊಂದಿಗೆ ಮೊದಲ ಸ್ಥಾನಕ್ಕೇರಿದ್ದಾರೆ. ಇದರೊಂದಿಗೆ ಎಬಿಡಿ ವೃತ್ತಿ ಜೀವನದಲ್ಲಿ 14ನೇ ಬಾರಿ ನಂ.1 ಸ್ಥಾನಕ್ಕೇರಿದ ಸಾಧನೆ ಮಾಡಿದ್ದಾರೆ.

ಬೌಲಿಂಗ್ ವಿಭಾಗದಲ್ಲಿ ಭಾರತದ ಯುವ ವೇಗದ ಬೌಲರ್ ಜಸ್‌ಪ್ರೀತ್ ಬುಮ್ರಾ ಒಂದು ಸ್ಥಾನ ಕುಸಿತ ಕಂಡಿದ್ದು 6ನೇ ಸ್ಥಾನ ಪಡೆದಿದ್ದಾರೆ. ಪಾಕಿಸ್ತಾನದ ವೇಗದ ಬೌಲರ್ ಹಸನ್ ಅಲಿ 743 ಅಂಕಗಳಿಂದ ಮೊದಲ ಬಾರಿಗೆ ನಂ.1 ಸ್ಥಾನ ಪಡೆದಿದ್ದಾರೆ.

ಆಲ್ರೌಂಡರ್ ವಿಭಾಗದಲ್ಲಿ ಪಾಕಿಸ್ತಾನದ ಮೊಹಮ್ಮದ್ ಹಫೀಜ್ 360 ಅಂಕಗಳಿಂದ ಅಗ್ರಸ್ಥಾನ ಪಡೆದಿದ್ದಾರೆ. ಬಾಂಗ್ಲಾದೇಶದ ಶಕೀಬ್ ಅಲ್ ಹಸನ್, ಆಫ್ಘಾನಿಸ್ತಾನದ ಮೊಹಮ್ಮದ್ ನಬಿ, ಶ್ರೀಲಂಕಾದ ಆ್ಯಂಜೆಲೋ ಮ್ಯಾಥ್ಯೂಸ್ ಮತ್ತು ಇಂಗ್ಲೆಂಡ್‌ನ ಬೆನ್ ಸ್ಟೋಕ್ಸ್ ಕ್ರಮವಾಗಿ ಮೊದಲೈದು ಸ್ಥಾನದಲ್ಲಿದ್ದಾರೆ.