ಚಾಂಪಿಯನ್ಸ್ ಟ್ರೋಫಿ ಬಳಿಕ ದಕ್ಷಿಣ ಆಫ್ರಿಕಾ ಏಕದಿನ ತಂಡದ ನಾಯಕತ್ವ ತೊರೆದಿದ್ದ ಎಬಿಡಿ, ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯಿಂದಲೂ ಹೊರಗುಳಿದಿದ್ದರು.
ಜೋಹಾನ್ಸ್'ಬರ್ಗ್(ಅ.05): ಎಬಿ ಡಿವಿಲಿಯರ್ಸ್ ಅಭಿಮಾನಿಗಳ ಪಾಲಿಗೆ ಸಿಹಿ ಸುದ್ದಿಯೊಂದು ಹೊರಬಿದ್ದಿದೆ.
ಹೌದು, ದಕ್ಷಿಣ ಆಫ್ರಿಕಾ ತಂಡದ ಸೂಪರ್ ಮ್ಯಾನ್, ಮಾಜಿ ನಾಯಕ ಎಬಿ ಡಿವಿಲಿಯರ್ಸ್ ಇದೇ ತಿಂಗಳು 15ರಿಂದ ಬಾಂಗ್ಲಾದೇಶದ ವಿರುದ್ಧ ಆರಂಭವಾಗಲಿರುವ 3 ಪಂದ್ಯಗಳ ಏಕದಿನ ಸರಣಿಗೆ ದಕ್ಷಿಣ ಆಫ್ರಿಕಾ ತಂಡವನ್ನು ಕೂಡಿಕೊಂಡಿದ್ದಾರೆ.
ಚಾಂಪಿಯನ್ಸ್ ಟ್ರೋಫಿ ಬಳಿಕ ದಕ್ಷಿಣ ಆಫ್ರಿಕಾ ಏಕದಿನ ತಂಡದ ನಾಯಕತ್ವ ತೊರೆದಿದ್ದ ಎಬಿಡಿ, ಬಾಂಗ್ಲಾದೇಶದ ವಿರುದ್ಧದ ಟೆಸ್ಟ್ ಸರಣಿಯಿಂದಲೂ ಹೊರಗುಳಿದಿದ್ದರು.
ಇತ್ತೀಚೆಗಷ್ಟೇ ಟೆಸ್ಟ್ ಕ್ರಿಕೆಟ್'ಗೆ ನಿವೃತ್ತಿ ಘೋಷಿಸಿದ್ದ ಎಡಗೈ ಬ್ಯಾಟ್ಸ್'ಮನ್ ಜೆ.ಪಿ ಡುಮಿನಿ ಕೂಡಾ ಏಕದಿನ ತಂಡದಲ್ಲಿ ಸ್ಥಾನಗಿಟ್ಟಿಸಿಕೊಂಡಿದ್ದಾರೆ.