RCB ತಂಡದ ಸಂಪೂರ್ಣ ವೇಳಾಪಟ್ಟಿ ಇಲ್ಲಿದೆ ನೋಡಿ; ತವರಿನಲ್ಲಿ ಕನ್ನಡಿಗರ ವಿರುದ್ಧವೇ RCB ಮೊದಲ ಫೈಟ್

First Published 15, Feb 2018, 4:03 PM IST
Defending champions MI host CSK in IPL 2018 opener
Highlights

ಬೆಂಗಳೂರು ತಂಡ ತವರಿನಲ್ಲಿ ತನ್ನ ಮೊದಲ ಪಂದ್ಯವನ್ನು ಏ.13ರಂದು ಆಡಲಿದ್ದು, ಕರ್ನಾಟಕದ ತಾರಾ ಆಟಗಾರರಿಂದ ಕೂಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಎದುರಿಸಲಿದೆ. ತವರಿನಲ್ಲಿ ಆರ್‌ಸಿಬಿ ಒಟ್ಟು 7 ಪಂದ್ಯಗಳನ್ನು ಆಡಲಿದೆ.

ಮುಂಬೈ(ಫೆ.15): ಬಹುನಿರೀಕ್ಷಿತ 11ನೇ ಆವೃತ್ತಿಯ IPL ವೇಳಾಪಟ್ಟಿ ಪ್ರಕಟಗೊಂಡಿದ್ದು, 51 ದಿನಗಳ ಕಾಲ ನಡೆಯಲಿರುವ ಟೂರ್ನಿಗೆ ಸಿಲಿಕಾನ್ ಸಿಟಿ ಬೆಂಗಳೂರು ಸೇರಿದಂತೆ 9 ನಗರಗಳು ಆತಿಥ್ಯ ವಹಿಸಲಿವೆ.

ಹಾಲಿ ಚಾಂಪಿಯನ್ ಮುಂಬೈ ಇಂಡಿಯನ್ಸ್ ಹಾಗೂ ಚೆನ್ನೈ ಸೂಪರ್'ಕಿಂಗ್ಸ್ ತಂಡಗಳು ಏಪ್ರಿಲ್ 7ರಂದು ನಡೆಯಲಿರುವ ಉದ್ಘಾಟನಾ ಪಂದ್ಯದಲ್ಲಿ ಮುಖಾಮುಖಿಯಾಗಲಿವೆ. ಉದ್ಘಾಟನಾ ಪಂದ್ಯ ಹಾಗೂ ಫೈನಲ್ ಪಂದ್ಯಕ್ಕೆ ಮುಂಬೈನ ವಾಂಖೆಡೆ ಮೈದಾನ ಸಾಕ್ಷಿಯಾಗಲಿದೆ.

ವಿರಾಟ್ ಕೊಹ್ಲಿ ನೇತೃತ್ವದ ರಾಯಲ್ ಚಾಲೆಂಜರ್ಸ್‌ ಬೆಂಗಳೂರು ತಂಡ 11ನೇ ಆವೃತ್ತಿಯ ಮೊದಲ ಪಂದ್ಯವನ್ನು ಏ.8 (ಭಾನುವಾರ)ರಂದು ಆಡಲಿದೆ. ಭಾರತದ ಕ್ರಿಕೆಟ್ ಕಾಶಿ ಈಡನ್ ಗಾರ್ಡನ್ಸ್ ಮೈದಾನದಲ್ಲಿ 2 ಬಾರಿ ಚಾಂಪಿಯನ್ ಕೋಲ್ಕತಾ ನೈಟ್‌'ರೈಡರ್ಸ್‌ ತಂಡವನ್ನು ಆರ್‌ಸಿಬಿ ಎದುರಿಸಲಿದೆ. ಬೆಂಗಳೂರು ತಂಡ ತವರಿನಲ್ಲಿ ತನ್ನ ಮೊದಲ ಪಂದ್ಯವನ್ನು ಏ.13ರಂದು ಆಡಲಿದ್ದು, ಕರ್ನಾಟಕದ ತಾರಾ ಆಟಗಾರರಿಂದ ಕೂಡಿರುವ ಕಿಂಗ್ಸ್ ಇಲೆವೆನ್ ಪಂಜಾಬ್ ತಂಡವನ್ನು ಎದುರಿಸಲಿದೆ. ತವರಿನಲ್ಲಿ ಆರ್‌ಸಿಬಿ ಒಟ್ಟು 7 ಪಂದ್ಯಗಳನ್ನು ಆಡಲಿದೆ.

RCB ತಂಡದ ವೇಳಾಪಟ್ಟಿ ಇಲ್ಲಿದೆ ನೋಡಿ:

loader