ಮೊದಲ ಸ್ಥಾನದಲ್ಲಿ ಡೆಲ್ಲಿ- ಇತಿಹಾಸದಲ್ಲೇ ಇದೇ ಮೊದಲು ಎಂದ ಫ್ಯಾನ್ಸ್!

https://static.asianetnews.com/images/authors/56bf5dcb-7868-50e0-b2d0-38391a34809d.jpg
First Published 23, Apr 2019, 3:17 PM IST
Delhi capitals claim top spot after beating rajasthan but fans trolls team effort
Highlights

ರಾಜಸ್ಥಾನ ರಾಯಲ್ಸ್ ಮಣಿಸಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿರುವ ಡೆಲ್ಲಿ ತಂಡದ ಸಾಧನೆಗೆ ಅಭಿಮಾನಿಗಳು ಅಚ್ಚರಿ ಪ್ರತಿಕ್ರಿಯೆ ನೀಡಿದ್ದಾರೆ. ಕಳೆದ 11 ಆವೃತ್ತಿಗಳಲ್ಲಿ ಡೆಲ್ಲಿ ನಿರೀಕ್ಷಿತ ಪ್ರದರ್ಶನ ನೀಡಿಲ್ಲ. ಇದೀಗ ಮೊದಲ ಸ್ಥಾನ ಅಲಂಕರಿಸಿರುವುದಕ್ಕೆ ಸಾಮಾಜಿಕ ಜಾಲತಾಣದಲ್ಲಿ ಟ್ರೋಲ್ ಮಾಡಲಾಗಿದೆ.

ಜೈಪುರ(ಏ.23): ರಾಜಸ್ಥಾನ ರಾಯಲ್ಸ್ ವಿರುದ್ದ ಶಿಖರ್ ಧವನ್ ಹಾಗೂ ರಿಷಬ್ ಪಂತ್ ಸ್ಫೋಟಕ ಬ್ಯಾಟಿಂಗ್ ನೆರವಿನಿಂದ ಡೆಲ್ಲಿ ಕ್ಯಾಪಿಟಲ್ಸ್ ಭರ್ಜರಿ ಗೆಲುವು ಸಾಧಿಸಿತು. ಇದರೊಂದಿಗೆ ಐಪಿಎಲ್ ಅಂಕಪಟ್ಟಿಯಲ್ಲಿ ಮೊದಲ ಸ್ಥಾನದಲ್ಲಿದ್ದ ಚೆನ್ನೈ ಸೂಪರ್ ಕಿಂಗ್ಸ್ ಹಿಂದಿಕ್ಕಿದ ಡೆಲ್ಲಿ, ಅಗ್ರಸ್ಥಾನಕ್ಕೇರಿದೆ. ಡೆಲ್ಲಿ ಸಾಧನೆ ಅಭಿಮಾನಿಗಳಿಗೆ ಅಚ್ಚರಿ ತಂದಿದೆ. 2012ರ ಬಳಿಕ ಇದೇ ಮೊದಲ ಬಾರಿಗೆ ಡೆಲ್ಲಿ ಅಂಕಪಟ್ಟಿಯಲ್ಲಿ ಮೊದಲ ಸ್ಥಾನ ಅಲಂಕರಿಸಿದೆ. 

ಡೆಲ್ಲಿ ಮೊದಲ ಸ್ಥಾನ ಅಲಂಕರಿಸಿರುವುದು ಐಪಿಎಲ್ ಇತಿಹಾಸದಲ್ಲಿ ಇದೇ ಮೊದಲು. ಕಳೆದ ವರ್ಷ ಡೆಲ್ಲಿ ಮೊದಲ ಸ್ಥಾನದಲ್ಲಿತ್ತು. ನಾನು ಒದುತ್ತಿರುವುದು ಮಾಲಿನ್ಯ ಪಟ್ಟಿ ಎಂದು ಟ್ರೋಲ್ ಮಾಡಿದ್ದಾರೆ. 

 

 

 

 

 

 

 

 

 

 

loader