ಹೈದರಾಬಾದ್[ಮೇ.05]: ಪೃಥ್ವಿ ಶಾ ಆಕರ್ಷಕ ಅರ್ಧಶತಕ ಹಾಗೂ ಶ್ರೇಯಸ್ ಅಯ್ಯರ್[44] ಉಪಯುಕ್ತ ಬ್ಯಾಟಿಂಗ್ ನೆರವಿನಿಂದ ಸನ್’ರೈಸರ್ಸ್ ಹೈದರಾಬಾದ್ ವಿರುದ್ಧ ಡೆಲ್ಲಿ ಡೇರ್’ಡೆವಿಲ್ಸ್ 163 ರನ್’ಗಳ ಸವಾಲಿನ ಮೊತ್ತ ಕಲೆಹಾಕಿದೆ.
ಟಾಸ್ ಗೆದ್ದು ಮೊದಲು ಬ್ಯಾಟಿಂಗ್ ಮಾಡಿದ ಡೆಲ್ಲಿ ಆರಂಭದಲ್ಲೇ ಗ್ಲೇನ್ ಮ್ಯಾಕ್ಸ್’ವೆಲ್ ವಿಕೆಟ್ ಕಳೆದುಕೊಂಡಿತು. ಆರಂಭಿಕನಾಗಿ ಕಣಕ್ಕಿಳಿದ ಮ್ಯಾಕ್ಸ್’ವೆಲ್ 2 ರನ್ ಬಾರಿಸಿ ರನೌಟ್ ಆಗುವ ಮೂಲಕ ಮತ್ತೊಮ್ಮೆ ವಿಫಲರಾದರು. ಆ ಬಳಿಕ ಎರಡನೇ ವಿಕೆಟ್’ಗೆ ಜತೆಯಾದ ಪೃಥ್ವಿ ಶಾ ಹಾಗೂ ಶ್ರೇಯಸ್ ಅಯ್ಯರ್ ಜೋಡಿ 86 ರನ್’ಗಳ ಜತೆಯಾಟವಾಡುವ ಮೂಲಕ ತಂಡಕ್ಕೆ ಆಸರೆಯಾದರು. ಸ್ಫೋಟಕ ಇನಿಂಗ್ಸ್ ಕಟ್ಟಿದ ಪೃಥ್ವಿ ಶಾ ಕೇವಲ 36 ಎಸೆತಗಳಲ್ಲಿ 3 ಬೌಂಡರಿ 2 ಸಿಕ್ಸರ್’ಗಳ ನೆರವಿನಿಂದ 65 ರನ್ ಸಿಡಿಸಿ ರಶೀದ್ ಖಾನ್’ಗೆ ವಿಕೆಟ್ ಒಪ್ಪಿಸಿದರು. ನಾಯಕ ಶ್ರೇಯಸ್ ಅಯ್ಯರ್ 44 ರನ್ ಸಿಡಿಸಿದರು. ವಿಕೆಟ್’ಕೀಪರ್ ಬ್ಯಾಟ್ಸ್’ಮನ್ ರಿಶಭ್ ಪಂತ್ 18 ರನ್ ಬಾರಿಸಿದರೆ, ಕೊನೆಯಲ್ಲಿ ವಿಜಯ್ ಶಂಕರ್ 23 ರನ್ ಚಚ್ಚುವ ಮೂಲಕ ತಂಡದ ಮೊತ್ತವನ್ನು 150ರ ಗಡಿ ದಾಟಿಸಿದರು.
ಸನ್’ರೈಸರ್ಸ್ ಪರ ರಶೀದ್ ಖಾನ್ 2 ವಿಕೆಟ್ ಪಡೆದರೆ, ಸಿದ್ದಾರ್ಥ್ ಕೌಲ್ ಒಂದು ವಿಕೆಟ್ ಪಡೆದರು.
ಸಂಕ್ಷಿಪ್ತ ಸ್ಕೋರ್:
ಡೆಲ್ಲಿ ಡೇರ್’ಡೆವಿಲ್ಸ್: 
163/5
ಪೃಥ್ವಿ ಶಾ: 65
ರಶೀದ್ ಖಾನ್: 23/2
[* ವಿವರ ಅಪೂರ್ಣ]