ಇದೀಗ ಗಾಯದ ಸಮಸ್ಯೆಯಿಂದಾಗಿ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟ್ಸ್’ಮನ್ ಫಿಂಚ್ ಇಂದು ಕಣಕ್ಕಿಳಿಯುವ ನಿರೀಕ್ಷೆಯಿದೆ.

ಇಂದೋರ್(ಸೆ.24): ಈಗಾಗಲೇ ಮೊದಲೆರಡು ಪಂದ್ಯಗಳಲ್ಲಿ ಸೋತು, ಸರಣಿ ಕೈಚೆಲ್ಲುವ ಹೊಸ್ತಿಲಲ್ಲಿರುವ ವಿಶ್ವಚಾಂಪಿಯನ್ ಆಸ್ಟ್ರೇಲಿಯಾ ತಂಡಕ್ಕೆ ಸ್ಫೋಟಕ ಆರಂಭಿಕ ಬ್ಯಾಟ್ಸ್’ಮನ್ ಆರೋನ್ ಫಿಂಚ್ ಬಲ ತುಂಬುವ ಸಾಧ್ಯತೆಯಿದೆ.

ಸಮಗ್ರ ಸುದ್ದಿ ಮೂಲವನ್ನಾಗಿ asianet suvarna news ಅನ್ನು ಆಯ್ಕೆ ಮಾಡಿಕೊಳ್ಳಿgooglePreferred

ಈಗಾಗಲೇ ಬ್ಯಾಟಿಂಗ್ ವಿಭಾಗದಲ್ಲಿ ತೀರಾ ಕಳಪೆ ಪ್ರದರ್ಶನ ತೋರುತ್ತಿರುವ ಆಸೀಸ್ ಬ್ಯಾಟ್ಸ್’ಮನ್’ಗಳಾದ ಡೇವಿಡ್ ವಾರ್ನರ್, ಗ್ಲೇನ್ ಮ್ಯಾಕ್ಸ್’ವೆಲ್ ಅವರಿಂದ ನಿರೀಕ್ಷಿತ ಪ್ರದರ್ಶನ ಮೂಡಿ ಬರುತ್ತಿಲ್ಲ. ಹಾಗಾಗಿ ಉಳಿದ ಬ್ಯಾಟ್ಸ್’ಮನ್’ಗಳು ಒತ್ತಡಕ್ಕೆ ಒಳಗಾಗಿ ವಿಕೆಟ್ ಒಪ್ಪಿಸುತ್ತಿದ್ದಾರೆ.

ಇದೀಗ ಗಾಯದ ಸಮಸ್ಯೆಯಿಂದಾಗಿ ಮೊದಲೆರಡು ಪಂದ್ಯಗಳಿಂದ ಹೊರಗುಳಿದಿದ್ದ ಆಸ್ಟ್ರೇಲಿಯಾ ತಂಡದ ಆರಂಭಿಕ ಬ್ಯಾಟ್ಸ್’ಮನ್ ಫಿಂಚ್ ಇಂದು ಕಣಕ್ಕಿಳಿಯುವ ನಿರೀಕ್ಷೆಯಿದೆ.

ನೇಥನ್ ಕೌಲ್ಟರ್’ನಿಲ್ ಹಾಗೂ ಪ್ಯಾಟ್ ಕಮಿನ್ಸ್ ಉತ್ತಮ ಬೌಲಿಂಗ್ ಪ್ರದರ್ಶನದ ಹೊರತಾಗಿಯೂ ಬ್ಯಾಟ್ಸ್’ಮನ್’ಗಳ ದಯಾನೀಯ ವೈಫಲ್ಯದಿಂದಾಗಿ 5 ಪಂದ್ಯಗಳ ಸರಣಿಯಲ್ಲಿ ಈಗಾಗಲೇ ಎರಡು ಪಂದ್ಯಗಳನ್ನು ಕೈಚೆಲ್ಲಿದೆ. ಇದೀಗ ಫಿಂಚ್ ಆಗಮನ ತಂಡದ ಮೇಲೆ ಯಾವ ಪರಿಣಾಮ ಬೀರಲಿದೆ ಎನ್ನುವುದನ್ನು ಕಾದುನೋಡಬೇಕಿದೆ.