ಟೀಂ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ ಮಾಹಿ ಹಾಗೂ ಹಲವಾರು ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಿಕೊಟ್ಟ ಯುವಿ ಟೀಂ ಇಂಡಿಯಾದ ಎರಡು ಪ್ರಮುಖ ಆಧಾರಸ್ತಂಭಗಳಾಗಿದ್ದಾರೆ ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.
ಬೆಂಗಳೂರು(ಮೇ.24): ಟೀಂ ಇಂಡಿಯಾ ಮಾಜಿ ನಾಯಕ ಮಹೇಂದ್ರ ಸಿಂಗ್ ಧೋನಿ ಮತ್ತು ಅನುಭವಿ ಆಟಗಾರ ಯುವರಾಜ್ ಸಿಂಗ್ ಭಾರತ ತಂಡದ ಎರಡು ಆಧಾರ ಸ್ತಂಭಗಳೆಂದು ಟೀಂ ಇಂಡಿಯಾ ನಾಯಕ ವಿರಾಟ್ ಕೊಹ್ಲಿ ಹೇಳಿದ್ದಾರೆ.
ಮುಂದಿನ ತಿಂಗಳು ಒಂದರಿಂದ ಜರುಗಲಿರುವ ಚಾಂಪಿಯನ್ಸ್ ಟ್ರೋಫಿಗೆ ತೆರಳುವ ಮುನ್ನ ಸುದ್ದಿಗಾರರೊಂದಿಗೆ ಮಾತನಾಡಿದ ಕೊಹ್ಲಿ, "ಈ ಬಾರಿ ನಮ್ಮ ತಂಡದಲ್ಲಿ ಸಾಕಷ್ಟು ಅನುಭವಿ ಆಟಗಾರರಿದ್ದಾರೆ. ಯುವರಾಜ್ ಸಿಂಗ್ ಅವರಿಗೆ ಸಾಕಷ್ಟು ಚಾಂಪಿಯನ್ಸ್ ಟ್ರೋಫಿ ಆಡಿದ ಅನುಭವವಿದೆ. ಇನ್ನು ಟೀಂ ಇಂಡಿಯಾದ ಯಶಸ್ವಿ ನಾಯಕನೆನಿಸಿಕೊಂಡಿರುವ ಧೋನಿ ಸಹ ತಂಡದಲ್ಲಿರುವುದು ಸಹಜವಾಗಿಯೇ ತಂಡದ ಆತ್ಮವಿಶ್ವಾಸವನ್ನು ಹೆಚ್ಚಿಸಿದೆ" ಎಂದು ಕೊಹ್ಲಿ ಹೇಳಿದ್ದಾರೆ.
ಟೀಂ ಇಂಡಿಯಾವನ್ನು ಯಶಸ್ವಿಯಾಗಿ ಮುನ್ನಡೆಸಿದ ಮಾಹಿ ಹಾಗೂ ಹಲವಾರು ಪಂದ್ಯಗಳನ್ನು ಏಕಾಂಗಿಯಾಗಿ ಗೆಲ್ಲಿಸಿಕೊಟ್ಟ ಯುವಿ ಟೀಂ ಇಂಡಿಯಾದ ಎರಡು ಪ್ರಮುಖ ಆಧಾರಸ್ತಂಭಗಳಾಗಿದ್ದಾರೆ ಎಂದು ಕೊಹ್ಲಿ ಅಭಿಪ್ರಾಯಪಟ್ಟಿದ್ದಾರೆ.
ಚಾಂಪಿಯನ್ಸ್ ಟ್ರೋಫಿಯಲ್ಲಿ ಜೂನ್ 4ರಂದು ಟೀಂ ಇಂಡಿಯಾವು ಮೊದಲ ಪಂದ್ಯದಲ್ಲಿ ಪಾಕಿಸ್ತಾನ ತಂಡವನ್ನು ಎದುರಿಸಲಿದೆ.