ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್ ಪ್ರಕಟ

Dimuth Karunaratne Jason Holder shoot up ranking tables
Highlights

ಬ್ಯಾಟ್ಸ್’ಮನ್’ಗಳ ವಿಭಾಗದಲ್ಲಿ ಸ್ಟೀವ್ ಸ್ಮಿತ್ ಅಗ್ರಸ್ಥಾನದಲ್ಲೇ ಮುಂದುವರೆದರೆ, ವಿರಾಟ್ ಕೊಹ್ಲಿ, ಜೋ ರೋಟ್, ಕೇನ್ ವಿಲಿಯಮ್ಸನ್ ಹಾಗೂ ಡೇವಿಡ್ ವಾರ್ನರ್ ಟಾಪ್ 5 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. 

ದುಬೈ[ಜು.15]: ಐಸಿಸಿ ನೂತನ ಟೆಸ್ಟ್ ರ‍್ಯಾಂಕಿಂಗ್ ಪ್ರಕಟಗೊಂಡಿದ್ದು ಶ್ರೀಲಂಕಾದ ದಿಮುತ್ ಕರುಣಾರತ್ನೆ ಟಾಪ್ 10 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ.

ಬ್ಯಾಟ್ಸ್’ಮನ್’ಗಳ ವಿಭಾಗದಲ್ಲಿ ಸ್ಟೀವ್ ಸ್ಮಿತ್ ಅಗ್ರಸ್ಥಾನದಲ್ಲೇ ಮುಂದುವರೆದರೆ, ವಿರಾಟ್ ಕೊಹ್ಲಿ, ಜೋ ರೋಟ್, ಕೇನ್ ವಿಲಿಯಮ್ಸನ್ ಹಾಗೂ ಡೇವಿಡ್ ವಾರ್ನರ್ ಟಾಪ್ 5 ಪಟ್ಟಿಯಲ್ಲಿ ಸ್ಥಾನ ಪಡೆದಿದ್ದಾರೆ. ದಕ್ಷಿಣ ಆಫ್ರಿಕಾ ವಿರುದ್ಧ ಗಾಲೆ ಟೆಸ್ಟ್’ನಲ್ಲಿ ಭರ್ಜರಿ ಶತಕ ಸಿಡಿಸಿದ್ದ ಕರುಣಾರತ್ನೆ 21 ಸ್ಥಾನ ಏರಿಕೆ ಕಂಡು 10ನೇ ಸ್ಥಾನಕ್ಕೆ ಲಗ್ಗೆಯಿಟ್ಟಿದ್ದಾರೆ.

ಇನ್ನು ಬೌಲಿಂಗ್ ವಿಭಾಗದಲ್ಲೂ ಮೊದಲ 7 ಸ್ಥಾನಗಳಲ್ಲಿ ಯಾವುದೇ ಬದಲಾವಣೆಗಳಾಗಿಲ್ಲ. ಕಗಿಸೋ ರಬಾಡ ನಂ.1 ಸ್ಥಾನ ಉಳಿಸಿಕೊಂಡರೆ, ಜೇಮ್ಸ್ ಆ್ಯಂಡರ್’ಸನ್, ರವೀಂದ್ರ ಜಡೇಜಾ, ವೆರ್ನಾನ್ ಫಿಲಾಂಡರ್ ಹಾಗೂ ರವಿಚಂದ್ರನ್ ಅಶ್ವಿನ್ ಟಾಪ್ 5 ಪಟ್ಟಿಯಲ್ಲಿದ್ದಾರೆ.

ಇನ್ನು ಆಲ್ರೌಂಡರ್ ವಿಭಾಗದಲ್ಲಿ ಬಾಂಗ್ಲಾದೇಶದ ಶಕೀಬ್ ಅಲ್ ಹಸನ್ ಮೊದಲ ಸ್ಥಾನದಲ್ಲಿ ಮುಂದುವರೆದರೆ, ರವೀಂದ್ರ ಜಡೇಜಾ, ವೆರ್ನಾನ್ ಫಿಲಾಂಡರ್, ರವಿಚಂದ್ರನ್ ಅಶ್ವಿನ್ ಹಾಗೂ ಜೇಸನ್ ಹೋಲ್ಡರ್ ಅಗ್ರ 5 ಸ್ಥಾನ ಪಡೆದುಕೊಂಡಿದ್ದಾರೆ.
 

loader