ನ್ಯಾ. ಲೋಧಾ ಸಮಿತಿ ಶಿಫಾರಸುಗಳಂತೆ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚಿನ ಹುದ್ದೆಗಳನ್ನು ಹೊಂದುವಂತಿಲ್ಲ.

ಮುಂಬೈ(ಫೆ.09): ಭಾರತ ತಂಡದ ಮಾಜಿ ನಾಯಕರಾದ ಸೌರವ್ ಗಂಗೂಲಿ ಹಾಗೂ ರಾಹುಲ್ ದ್ರಾವಿಡ್ ಹಿತಾಸಕ್ತಿ ಸಂಘರ್ಷಕ್ಕೆ ಸಿಲುಕಿದ್ದು, ಬಹುತೇಕ ಅವರು ಬಿಸಿಸಿಐ ಆಡಳಿತ ಸಮಿತಿಯ ಎದುರು ಸ್ಪಷ್ಟನೆ ನೀಡುವ ಸಂಭವವಿದೆ ಎಂದು ಟೈಮ್ಸ್ ಇಂಡಿಯಾ ವರದಿ ಮಾಡಿದೆ.

ಭಾರತ ಕಿರಿಯರ ತಂಡದ ಕೋಚ್ ಆಗಿರುವ ರಾಹುಲ್ ದ್ರಾವಿಡ್, ಐಪಿಎಲ್‌'ನಲ್ಲಿ ಡೆಲ್ಲಿ ಡೇರ್‌ಡೆವಿಲ್ಸ್ ತಂಡದ ಪ್ರಧಾನ ಸಲಹೆಗಾರರಾಗಿದ್ದಾರೆ. ಅಂತೆಯೇ, ಬಂಗಾಳ ಕ್ರಿಕೆಟ್ ಸಂಸ್ಥೆ (ಸಿಎಬಿ) ಅಧ್ಯಕ್ಷರಾಗಿರುವ ಗಂಗೂಲಿ, ಬಿಸಿಸಿಐ ತಾಂತ್ರಿಕ ಸಮಿತಿಯ ಅಧ್ಯಕ್ಷರೂ ಹೌದು. ಇದರ ಜೊತೆಗೆ ಐಪಿಎಲ್ ಆಡಳಿತ ಸಮಿತಿಯ ಸದಸ್ಯರಾಗಿ ಕೂಡ ಕಾರ್ಯನಿರ್ವಹಿಸುತ್ತಿದ್ದಾರೆ.

ನ್ಯಾ. ಲೋಧಾ ಸಮಿತಿ ಶಿಫಾರಸುಗಳಂತೆ ಒಬ್ಬ ವ್ಯಕ್ತಿ ಒಂದಕ್ಕಿಂತ ಹೆಚ್ಚಿನ ಹುದ್ದೆಗಳನ್ನು ಹೊಂದುವಂತಿಲ್ಲ.