ಟಿ20 ಕ್ರಿಕೆಟ್‌ನಲ್ಲಿ 2ನೇ ಶತಕ ಸಿಡಿಸಿ ಭಾರತಕ್ಕೆ ಭರ್ಜರಿ ಗೆಲುವು ತಂದುಕೊಟ್ಟ ಕೆಎಲ್ ರಾಹುಲ್‌ಗೆ ಪ್ರಶಂಸೆ ವ್ಯಕ್ತವಾಗಿದೆ. ರಾಹುಲ್ ಪ್ರದರ್ಶನಕ್ಕೆ ಕ್ರಿಕೆಟಿಗರು ಪ್ರತಿಕ್ರಿಯೆ ಹೇಗಿತ್ತು? ಇಲ್ಲಿದೆ
ಓಲ್ಡ್ ಟ್ರಾಫೋರ್ಡ್(ಜು.04): ಇಂಗ್ಲೆಂಡ್ ವಿರುದ್ಧದ ಮೊದಲ ಟಿ20 ಪಂದ್ಯದಲ್ಲಿ ಸೆಂಚುರಿ ಸಿಡಿಸಿದ ಕೆಎಲ್ ರಾಹುಲ್‌ಗೆ ಭಾರತ ಸೇರಿದಂತೆ ವಿಶ್ವ ಕ್ರಿಕೆಟಿಗರು ಸಲಾಮ್ ಹೇಳಿದ್ದಾರೆ. ಓಲ್ಡ್ ಟ್ರಾಫೋರ್ಡ್ ಪಂದ್ಯದಲ್ಲಿ ರಾಹುಲ್ ಸ್ಫೋಟಕ ಇನ್ನಿಂಗ್ಸ್ ಮೂಲಕ ಸೆಂಚುರಿ ಸಿಡಿಸಿದ್ದರು.
ಇಂಗ್ಲೆಂಡ್ ನೀಡಿದ್ದ 160 ರನ್ ಟಾರ್ಗೆಟ್ ಬೆನ್ನಟ್ಟಿದ ಭಾರತಕ್ಕೆ ಕೆಎಲ್ ರಾಹುಲ್ ಶತಕ ಗೆಲುವಿನ ಸಿಹಿ ನೀಡಿತು. 54 ಎಸೆತದಲ್ಲಿ 10 ಬೌಂಡರಿ ಹಾಗೂ 5 ಸಿಕ್ಸರ್ ಮೂಲಕ ಅಜೇಯ 101 ರನ್ ಸಿಡಿಸಿದ್ದರು. ಈ ಮೂಲಕ ಭಾರತ 8 ವಿಕೆಟ್‌ಗಳ ಗೆಲುವು ದಾಖಲಿಸಿತ್ತು. ಟೀಂಇಂಡಿಯಾ ಹಾಗೂ ರಾಹುಲ್ ಅದ್ಬುತ ಪ್ರದರ್ಶನಕ್ಕೆ ಟ್ವಿಟರ್‌ನಲ್ಲಿ ಕ್ರಿಕೆಟಿಗರ ಪ್ರತಿಕ್ರಿಯೆ ಇಲ್ಲಿದೆ.
