ಪಾಕ್’ಗೆ ತಲೆಬಾಗಿದ ಆಂಗ್ಲರ ಪಡೆ
ಪಾಕಿಸ್ತಾನ ತಂಡವು ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದು, 2 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಇದೀಗ 1-0 ಮುನ್ನಡೆ ಕಾಯ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ಪಡೆಯನ್ನು 184 ರನ್’ಗಳಿಗೆ ನಿಯಂತ್ರಿಸಿದ್ದ ಪಾಕ್ ಬಳಿಕ ಮೊದಲ ಇನಿಂಗ್ಸ್’ನಲ್ಲಿ 363 ರನ್ ಬಾರಿಸಿತ್ತು.
ಲಂಡನ್[ಮೇ.27]: ಬ್ಯಾಟಿಂಗ್ ಹಾಗೂ ಬೌಲಿಂಗ್’ನಲ್ಲಿ ಸಂಘಟಿತ ಪ್ರದರ್ಶನ ತೋರಿದ ಸರ್ಫರಾಜ್ ಅಹಮ್ಮದ್ ನೇತೃತ್ವದ ಪಾಕಿಸ್ತಾನ ತಂಡ ಕ್ರಿಕೆಟ್ ಕಾಶಿ ಲಾರ್ಡ್ಸ್’ನಲ್ಲಿ ಇಂಗ್ಲೆಂಡ್ ಪಡೆಯನ್ನು 9 ವಿಕೆಟ್’ಗಳಿಂದ ಮಣಿಸುವ ಮೂಲಕ ಭರ್ಜರಿಯಾಗಿ ಶುಭಾರಂಭ ಮಾಡಿದೆ.
ಪಾಕಿಸ್ತಾನ ತಂಡವು ಇಂಗ್ಲೆಂಡ್ ಪ್ರವಾಸ ಕೈಗೊಂಡಿದ್ದು, 2 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಇದೀಗ 1-0 ಮುನ್ನಡೆ ಕಾಯ್ದುಕೊಂಡಿದೆ. ಮೊದಲು ಬ್ಯಾಟಿಂಗ್ ಮಾಡಿದ್ದ ಇಂಗ್ಲೆಂಡ್ ಪಡೆಯನ್ನು 184 ರನ್’ಗಳಿಗೆ ನಿಯಂತ್ರಿಸಿದ್ದ ಪಾಕ್ ಬಳಿಕ ಮೊದಲ ಇನಿಂಗ್ಸ್’ನಲ್ಲಿ 363 ರನ್ ಬಾರಿಸಿತ್ತು. ಒಟ್ಟು 179 ರನ್’ಗಳ ಹಿನ್ನೆಡೆಯೊಂದಿಗೆ 2ನೇ ಇನಿಂಗ್ಸ್ ಆರಂಭಿಸಿದ್ದ ಇಂಗ್ಲೆಂಡ್ ಜೋ ರೂಟ್, ಬಟ್ಲರ್ ಅರ್ಧಶತಕದ ನೆರವಿನಿಂದ 242 ರನ್’ಗಳಿಸಿತ್ತು. ಅಂತಿಮವಾಗಿ ಪಾಕ್’ಗೆ ಗೆಲ್ಲಲು 64 ರನ್’ಗಳ ಅವಶ್ಯಕತೆಯಿತ್ತು. ಸುಲಭ ಗುರಿ ಬೆನ್ನತ್ತಿದ ಪಾಕಿಸ್ತಾನ ಕೇವಲ ಒಂದು ವಿಕೆಟ್ ಕಳೆದುಕೊಂಡು ಜಯದ ನಗೆ ಬೀರಿತು.
ಮೊದಲ ಟೆಸ್ಟ್’ನಲ್ಲಿ 8 ವಿಕೆಟ್ ಕಬಳಿಸಿದ ಮೊಹಮ್ಮದ್ ಅಬ್ಬಾಸ್ ಪಂದ್ಯಪುರುಷೋತ್ತಮ ಗೌರವಕ್ಕೆ ಪಾತ್ರರಾದರು.
ಸಂಕ್ಷಿಪ್ತ ಸ್ಕೋರ್:
ಇಂಗ್ಲೆಂಡ್: 184 & 242
ಪಾಕಿಸ್ತಾನ 363 & 66/1