ಲಂಡನ್(ಏ.17): 2019ರ ವಿಶ್ವಕಪ್ ಟೂರ್ನಿಗೆ ಕ್ರಿಕೆಟ್ ರಾಷ್ಟ್ರಗಳು ತಂಡಗಳನ್ನು ಪ್ರಕಟಗೊಳಿಸುತ್ತಿದೆ. ಭಾರತ, ಆಸ್ಟ್ರೇಲಿಯಾ, ನ್ಯೂಜಿಲೆಂಡ್ ಸೇರಿದಂತೆ ಹಲವು ತಂಡಗಳು ಈಗಾಗಲೇ ಪ್ರಕಟಗೊಂಡಿದೆ. ಇದೀಗ ಆತಿಥೇಯ ಇಂಗ್ಲೆಂಡ್ 15 ಸದಸ್ಯರ ತಂಡ ಪ್ರಕಟಿಸಿದೆ. 2019ರ ವಿಶ್ವಕಪ್ ಟೂರ್ನಿಯಲ್ಲಿ ಇಂಗ್ಲೆಂಡ್ ತಂಡವನ್ನು ಇಯಾನ್ ಮಾರ್ಗನ್ ಮುನ್ನಡೆಸಲಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ; ಕನ್ನಡಿಗನಿಗೆ ಚಾನ್ಸ್

ಜಾನಿ ಬೈರ್‌ಸ್ಟೋ ವಿಶ್ವಕಪ್ ತಂಡದಲ್ಲಿ ಸ್ಥಾನ ಪಡೆಯುವಲ್ಲಿ ಯಶಸ್ವಿಯಾಗಿದ್ದಾರೆ. ವಿಶ್ವಕಪ್ ತಂಡದಿಂದ ಜೋಫ್ರಾ ಅರ್ಚರ್ ಹಾಗೂ ಕ್ರಿಸ್ ಜೋರ್ಡನ್‌ಗೆ ಕೊಕ್ ನೀಡಲಾಗಿದೆ. ಇವರಿಬ್ಬರನ್ನೂ ಪಾಕಿಸ್ತಾನ ವಿರುದ್ಧದ ಸರಣಿಗೆ ಆಯ್ಕೆ ಮಾಡಲಾಗಿದೆ.  ಬಲಿಷ್ಠ ತಂಡವನ್ನೇ ಪ್ರಕಟಿಸಿರುವ ಇಂಗ್ಲೆಂಡ್ ಚೊಚ್ಚಲ ಪ್ರಶಸ್ತಿ ನಿರೀಕ್ಷೆಯಲ್ಲಿದೆ. 

ಇದನ್ನೂ ಓದಿ: ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟ- ಇವರಿಗೆ ಶಾಕ್ ನೀಡಿದ ಬಿಸಿಸಿಐ!

ಇಂಗ್ಲೆಂಡ್ ತಂಡ:
ಇಯಾನ್ ಮಾರ್ಗನ್(ನಾಯಕ), ಮೊಯಿನ್ ಆಲಿ, ಜಾನಿ ಬೈರ್‌ಸ್ಟೋ, ಜೋಸ್ ಬಟ್ಲರ್, ಟಾಮ್ ಕುರ್ರನ್, ಜೊ ಡೆನ್ಲಿ, ಅಲೆಕ್ಸ್ ಹೇಲ್ಸ್, ಲಿಯಾಮ್ ಪ್ಲಂಕೆಟ್, ಆದಿಲ್ ರಶೀದ್, ಜೋ ರೂಟ್, ಜಾಸನ್ ರೊಯ್, ಬೆನ್ ಸ್ಟೋಕ್ಸ್, ಡೇವಿಡ್ ವಿಲೆ, ಕ್ರಿಸ್ ವೋಕ್ಸ್, ಮಾರ್ಕ್ ವುಡ್