ಚೆಲ್ಮ್ಸ್‌ಫೋರ್ಡ್(ಜು.27): ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಭಾರತದ ಇಂಜುರಿ ಸಮಸ್ಯೆಗೆ ಮುಕ್ತಿ ಸಿಗುತ್ತಿಲ್ಲ. ಜಸ್‌ಪ್ರೀತ್ ಬುಮ್ರಾ ಹಾಗೂ ಭುವನೇಶ್ವರ್ ಕುಮಾರ್ ಇಂಜುರಿ ಬಳಿಕ ಇದೀಗ ಸ್ಪಿನ್ನರ್ ಆರ್ ಅಶ್ವಿನ್ ಕೂಡ ಗಾಯಗೊಂಡಿದ್ದಾರೆ. 

ಅಭ್ಯಾಸ ಪಂದ್ಯದಲ್ಲಿ ಆರ್ ಅಶ್ವಿನ್ ಕೈಗೆ ಗಾಯವಾಗಿದೆ. ಹೀಗಾಗಿ ಅಶ್ವಿನ್ ಬ್ಯಾಟಿಂಗ್ ಹಾಗೂ ಬೌಲಿಂಗ್ ಮಾಡಿಲ್ಲ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿ ಆರಂಭಕ್ಕೂ ಮುನ್ನ ಟೀಂ ಇಂಡಿಯಾದ ಗಾಯದ ಲಿಸ್ಟ್ ಬೆಳೆಯುತ್ತಿದೆ. ಇದು ತಂಡದ ಆತಂಕಕ್ಕೆ ಕಾರಣವಾಗಿದೆ. 

ಹಿರಿಯ ಸ್ಪಿನ್ನರ್ ಆರ್ ಅಶ್ವಿನ್ ಇಂಜುರಿ ಗಂಭೀರವಾಗಿಲ್ಲ. ಮೊದಲ ಟೆಸ್ಟ್ ಪಂದ್ಯದ ವೇಳೆ ಸಂಪೂರ್ಣ ಗುಣಮುಖರಾಗಲಿದ್ದಾರೆ ಎಂದು ಟೀಂ ಇಂಡಿಯಾ ಫಿಸಿಯೋ ಹೇಳಿದ್ದಾರೆ. ಆದರೆ ಇಂಜುರಿ ಕಾರಣದಿಂದ ಇದೀಗ ಅಶ್ವಿನ್ ಬದಗಿಟ್ಟು ಕುಲದೀಪ್ ಯಾದವ್‌ಗೆ ಅವಕಾಶ ನೀಡಲಾಗುವುದು ಅನ್ನೋ ಮಾತುಗಳು ಕೇಳಿಬಂದಿದೆ.

ಅಭ್ಯಾಸ ಪಂದ್ಯದ ದ್ವಿತೀಯ ದಿನ ಸ್ಪಿನ್ ಕೋಟಾದಲ್ಲಿ ರವೀಂದ್ರ ಜಡೇಜಾ ಕೇವಲ 2 ಓವರ್ ಬೌಲಿಂಗ್
ಮಾಡಿದ್ದು ಯಾವುದೇ ವಿಕೆಟ್ ಪಡೆದಿಲ್ಲ. ಆದರೆ ವೇಗಿಗಳು 5 ವಿಕೆಟ್ ಕಬಳಿಸಿ ಮಿಂಚಿದ್ದಾರೆ. ಹೀಗಾಗಿ ಆರ್ ಅಶ್ವಿನ್ ಪ್ಲೇಯಿಂಗ್ 11ನಲ್ಲಿ ಸ್ಥಾನ ಪಡೆಯುತ್ತಾರ ಅನ್ನೋ ಕುತೂಹಲ ಮನೆಮಾಡಿದೆ.