ಲಂಡನ್(ಜು.22): ಇಂಗ್ಲೆಂಡ್ ವಿರುದ್ಧ ಟೆಸ್ಟ್ ಸರಣಿಗೆ ಸಜ್ಜಾಗುತ್ತಿರುವ ಟೀಂ ಇಂಡಿಯಾಗೆ ಇದೀಗ ತಲೆನೋವು ಶುರುವಾಗಿದೆ. ಪ್ಲೇಯಿಂಗ್ ಇಲೆವೆನ್‌ ಆಯ್ಕೆ ಇದೀಗ ನಾಯಕ ವಿರಾಟ್ ಕೊಹ್ಲಿ ಹಾಗೂ ಕೋಚ್ ರವಿ ಶಾಸ್ತ್ರಿಗೆ ಕಗ್ಗಂಟ್ಗಾಗಿದೆ.

ಆಯ್ಕೆ ಚರ್ಚೆ ನಡುವೆ ಭಾರತದ ಮಾಜಿ ಕ್ರಿಕೆಟಿಗರು ಹಲವು ಸೂಚನೆ ನೀಡಿದ್ದಾರೆ. ಇಂಗ್ಲೆಂಡ್ ವಿರುದ್ಧದ ಟೆಸ್ಟ್ ಸರಣಿಯಲ್ಲಿ ಇಬ್ಬರು ಸ್ಪಿನ್ನರ್‌ಗಳಿಗೆ ಅವಕಾಶ ನೀಡಬೇಕು ಅನ್ನೋ ಆಗ್ರಹ ಕೇಳಿ ಬಂದಿದೆ. ಇದಕ್ಕೆ ಮಾಜಿ ನಾಯಕ ಮೊಹಮ್ಮದ್ ಅಜರುದ್ದೀನ್ ಕೂಡ ಸಹಮತ ವ್ಯಕ್ತಪಡಿಸಿದ್ದಾರೆ.

ಆಂಗ್ಲರನ್ನ ಕಟ್ಟಿಹಾಕಲು ಹಿರಿಯ ಸ್ಪಿನ್ನರ್ ಆರ್ ಅಶ್ವಿನ್ ಹಾಗೂ ಯುವ ಸ್ಪಿನ್ನರ್ ಕುಲದೀಪ್ ಯಾದವ್‌ಗೆ ಅವಕಾಶ ನೀಡಬೇಕು ಎಂದು ಅಜರುದ್ದೀನ್ ಹೇಳಿದ್ದಾರೆ. 3 ವೇಗಿಗಳು ಹಾಗೂ 2 ಸ್ಪಿನ್ನರ್ ಕಾಂಬಿನೇಷನ್ ಅತ್ಯುತ್ತಮ ಎಂದು ಅಜರ್ ಸೂಚಿಸಿದ್ದಾರೆ. 

5 ಟೆಸ್ಟ್ ಪಂದ್ಯಗಳ ಸರಣಿಯಲ್ಲಿ ಭಾರತ ಗೆಲುವು ಸಾಧಿಸಲಿದೆ ಎಂದು ಅಜರ್ ವಿಶ್ವಾಸ ವ್ಯಕ್ತಪಡಿಸಿದ್ದಾರೆ. ಜೇಮ್ಸ್ ಆಂಡರ್ಸನ್ ಹಾಗೂ ಸ್ಟುವರ್ಟ್ ಬ್ರಾಡ್ ಇಂಜುರಿಯಿಂದ ಇಂಗ್ಲೆಂಡ್ ಬೌಲಿಂಗ್ ವಿಭಾಗ ಕಳಪೆಯಾಗಿದೆ. ಹೀಗಾಗಿ ಈ ಅವಕಾಶವನ್ನ ಭಾರತದ ಬ್ಯಾಟ್ಸ್‌ಮನ್‌ಗಳು ಸದುಪಯೋಗ ಪಡಿಸಿಕಕೊಳ್ಳಬೇಕು ಎಂದು ಅಜರ್ ಹೇಳಿದ್ದಾರೆ.