ಮುಂಬೈ(ಜು.12): ಭಾರತ ಹಾಗೂ ಇಂಗ್ಲೆಂಡ್ ನಡುವಿನ ಮೊದಲ ಏಕದಿನ ಪಂದ್ಯ ಆರಂಭಕ್ಕೂ ಮುನ್ನ ಮಾಜಿ ಕ್ರಿಕೆಟಿಗ ವಿವಿಎಸ್ ಲಕ್ಷ್ಮಣ ಸಂಭಾವ್ಯ ತಂಡವನ್ನ ಆಯ್ಕೆ ಮಾಡಿದ್ದಾರೆ. ಇದರಲ್ಲಿ ದಿನೇಶ್ ಕಾರ್ತಿಕ್ ಸ್ಥಾನ ಪಡೆಯುವಲ್ಲಿ ವಿಫಲರಾಗಿದ್ದಾರೆ.

ಲಕ್ಷ್ಮಣ್ ಆಯ್ಕೆ ಮಾಡಿರೋ ತಂಡದಲ್ಲಿ ಹೆಚ್ಚಿನ ಬದಲಾವಣೆಗಳಿಲ್ಲ. ಮಧ್ಯಮ ಕ್ರಮಾಂಕದಲ್ಲಿ ಸುರೇಶ್ ರೈನಾಗೆ ಅವಕಾಶ ನೀಡಿದ್ದರೆ, ನಾಯಕ ವಿರಾಟ್ ಕೊಹ್ಲಿ ನಾಲ್ಕನೇ ಕ್ರಮಾಂಕ ನೀಡಿದ್ದಾರೆ. ಇನ್ನು ಕೆಎಲ್ ರಾಹುಲ್‌ಗೆ 3ನೇ ಕ್ರಮಾಂಕ ಸೂಕ್ತ ಎಂದಿದ್ದಾರೆ. 

ವಿವಿಎಸ್ ಲಕ್ಷ್ಮಣ್ ತಂಡ: ರೋಹಿತ್ ಶರ್ಮಾ, ಶಿಖರ್ ಧವನ್, ಕೆಎಲ್ ರಾಹುಲ್, ವಿರಾಟ್  ಕೊಹ್ಲಿ, ಸುರೇಶ್ ರೈನಾ, ಎಂ ಎಸ್ ಧೋನಿ, ಹಾರ್ದಿಕ್ ಪಾಂಡ್ಯ, ಕುಲದೀಪ್ ಯಾದವ್, ಭುವನೇಶ್ವರ್ ಕುಮಾರ್, ಉಮೇಶ್ ಯಾದವ್, ಯಜುವೇಂದ್ರ ಚೆಹಾಲ್