ಪಲ್ಲೆಕೆಲೆ(ಸೆ.07): ಶ್ರೀಲಂಕಾ ಹಿರಿಯ ವೇಗಿ ಲಸಿತ್ ಮಾಲಿಂಗ ಈಗಾಗಲೇ ಏಕದಿನ ಕ್ರಿಕೆಟ್‌ನಿಂದ ವಿದಾಯ ಹೇಳಿದ್ದಾರೆ. ಟಿ20ಯಲ್ಲಿ ನಾಯಕನಾಗಿರುವ ಮಲಿಂಗ 36ರ ಹರೆಯದಲ್ಲೂ ಮಿಂಚಿನ ದಾಳಿ ಸಂಘಟಿಸಿ ಸ್ಥಿರ ಪ್ರದರ್ಶನ ನೀಡುತ್ತಿದ್ದಾರೆ. ನ್ಯೂಜಿಲೆಂಡ್ ವಿರುದ್ದದ 3ನೇ ಟಿ20 ಪಂದ್ಯದಲ್ಲಿ ಮಲಿಂಗ 4 ಎಸೆತದಲ್ಲಿ ಸತತ 4 ವಿಕೆಟ್ ಕಬಳಿಸಿ ದಾಖಲೆ ಬರೆದಿದ್ದಾರೆ. ಮಾಲಿಂಗ ಸಾಧನೆಯನ್ನು ಕ್ರಿಕೆಟ್ ದಿಗ್ಗಜರು ಸೇರಿದಂತೆ ಅಭಿಮಾನಿಗಳು ಮೆಚ್ಚುಗೆ ವ್ಯಕ್ತವಾಗಿದೆ.