ಮುಂಬೈ(ಜು.21): ವಿಶ್ವಕಪ್ ಟೂರ್ನಿ ಬಳಿಕ ವಿಶ್ರಾಂತಿಗೆ ಜಾರಿರುವ ಟೀಂ ಇಂಡಿಯಾ ಇದೀಗ ವೆಸ್ಟ್ ಇಂಡೀಸ್ ಪ್ರವಾಸಕ್ಕೆ ಸಜ್ಜಾಗಿದೆ. ಎಂ.ಎಸ್.ಕೆ.ಪ್ರಸಾದ್ ನೇತೃತ್ವದ ಆಯ್ಕೆ ಸಮಿತಿ ವಿಂಡೀಸ್ ಪ್ರವಾಸಕ್ಕೆ ತಂಡ ಆಯ್ಕೆ ಮಾಡಿದೆ. 3 ಟಿ20, 3 ಏಕದಿನ ಹಾಗೂ 2 ಟೆಸ್ಟ್ ಪಂದ್ಯದ ಸರಣಿಗೆ ತಂಡ ಆಯ್ಕೆ ಮಾಡಿದೆ. ಕನ್ನಡಿಗ ಮಯಾಂಕ್ ಅಗರ್ವಾಲ್ ಟೆಸ್ಟ್ ತಂಡಕ್ಕೆ ಆಯ್ಕೆಯಾಗಿದ್ದರೆ, ಏಕದಿನ ತಂಡದಿಂದ ಕಡೆಗಣಿಸಲಾಗಿದೆ. ಇದು ಹೊಸ ವಿವಾದಕ್ಕೆ ಕಾರಣವಾಗಿದೆ.

ಇದನ್ನೂ ಓದಿ: ವಿಂಡೀಸ್ ಪ್ರವಾಸಕ್ಕೆ ಟೀಂ ಇಂಡಿಯಾ ಪ್ರಕಟ; ಮೂರು ಕನ್ನಡಿಗರಿಗೆ ಸ್ಥಾನ

ಕನ್ನಡಿಗ ಮಯಾಂಕ್ ಅಗರ್ವಾಲ್‌ಗೆ ಏಕದಿನದಲ್ಲಿ ಸ್ಥಾನ ನೀಡದಿರುವುದನ್ನು ಅಭಿಮಾನಿಗಳು ಪ್ರಶ್ನಿಸಿದ್ದಾರೆ. ಏಕದಿನ ವಿಶ್ವಕಪ್ ಟೂರ್ನಿಯಲ್ಲಿ ಬದಲಿ ಆಟಗಾರನಾಗಿ ಮಯಾಂಕ್ ಅಗರ್ವಾಲ್‌ಗೆ ಅವಕಾಶ ನೀಡಲಾಗಿತ್ತು. ಪ್ರತಿಷ್ಠಿತ ವಿಶ್ವಕಪ್ ಟೂರ್ನಿಯಲ್ಲಿ ಸ್ಥಾನ ನೀಡಿದ್ದ ಆಯ್ಕೆ ಸಮಿತಿ ಇದೀಗ ವೆಸ್ಟ್ ಇಂಡೀಸ್ ಪ್ರವಾಸದಿಂದ ಹೊರಗಿಟ್ಟಿರುವುದು ಎಷ್ಟು ಸರಿ ಎಂದು ಪ್ರಶ್ನಿಸಿದ್ದಾರೆ.

ಇದನ್ನೂ ಓದಿ: ರಾಯುಡು 3D ಟ್ವೀಟ್‌ಗೆ ಮೊದಲ ಪ್ರತಿಕ್ರಿಯೆ ನೀಡಿದ ಆಯ್ಕೆ ಸಮಿತಿ!

ವಿಶ್ವಕಪ್ ಟೂರ್ನಿಯಲ್ಲಿ ಆಲ್ರೌಂಡರ್ ವಿಜಯ್ ಶಂಕರ್ ಇಂಜುರಿಗೆ ತುತ್ತಾದಾಗ ಮಯಾಂಕ್ ಅಗರ್ವಾಲ್ ಆಯ್ಕೆ ಮಾಡಲಾಗಿತ್ತು. ಮಯಾಂಕ್ ತಂಡ ಸೇರಿಕೊಂಡರೂ ಆಡೋ ಹನ್ನೊಂದರ ಬಳಗದಲ್ಲಿ ಅವಕಾಶ ಸಿಕ್ಕಿರಲಿಲ್ಲ. ವಿಶ್ವಕಪ್ ತಂಡಕ್ಕೆ ಆಯ್ಕೆಯಾಗೋ ಪ್ರತಿಭೆ ಇರುವ ಮಯಾಂಕ್‌ಗೆ, ವಿಂಡೀಸ್ ಪ್ರವಾಸ ಯಾಕಿಲ್ಲ ಎಂದು ಪ್ರಶ್ನಿಸಿದ್ದಾರೆ.