ಬೆಂಗಳೂರಿನ ಸಾಯ್’ನಲ್ಲಿ ಕಳಪೆ ಆಹಾರ..!
‘ಬೆಂಗಳೂರು ಸಾಯ್ ಕೇಂದ್ರದಲ್ಲಿ ಕಳಪೆ ಆಹಾರ ಪೂರೈಸಲಾಗುತ್ತಿದೆ. ಅಡುಗೆ ಕೋಣೆಯಲ್ಲಿ ಶುಚಿತ್ವ ಎಂಬುದು ಮಾಯಾವಾಗಿದೆ. ಅನಾರೋಗ್ಯಕರ ವಾತಾವರಣದಲ್ಲಿ ಅಡುಗೆ ಸಿದ್ಧಪಡಿಸಲಾಗುತ್ತಿದೆ. ಕ್ರೀಡಾಪಟುಗಳಿಗೆ ನೀಡುವ ಆಹಾರದಲ್ಲಿ ಎಣ್ಣೆ, ಕೊಬ್ಬಿನಾಂಶ ಅಧಿಕವಾಗಿದೆ. ಮಾಂಸಕ್ಕಿಂತ ಮೂಳೆಯೇ ಹೆಚ್ಚಾಗಿದೆ. ಇದಲ್ಲದೇ ಹುಳು, ಕೂದಲು ಊಟದಲ್ಲಿ ಸಾಮಾನ್ಯವಾಗಿ ಬಿಟ್ಟಿದೆ’ ಎಂದು ಆರೋಪಿಸಿದ್ದಾರೆ.
ನವದೆಹಲಿ[ಜೂ.12]: ಬೆಂಗಳೂರಿನಲ್ಲಿರುವ ಸಾಯ್ ಕೇಂದ್ರದಲ್ಲಿ ಕಳಪೆ ಆಹಾರ ಪೂರೈಕೆ ಮಾಡಲಾಡುತ್ತಿದೆ ಎಂದು ‘ಭಾರತ ಪುರುಷರ ಹಾಕಿ ತಂಡದ ಪ್ರಧಾನ ಕೋಚ್ ಹರೇಂದರ್ ಸಿಂಗ್ ಆರೋಪಿಸಿದ್ದಾರೆ. ಮುಂಬರುವ ಚಾಂಪಿಯನ್ಸ್ ಟ್ರೋಫಿಗಾಗಿ ಭಾರತ ತಂಡದ ಪ್ರಸ್ತುತ ಬೆಂಗಳೂರಿನಲ್ಲಿ ಅಭ್ಯಾಸ ನಡೆಸುತ್ತಿದೆ. ಈ ಕುರಿತು ‘ಭಾರತೀಯ ಒಲಿಂಪಿಕ್ಸ್ ಸಂಸ್ಥೆ ಮುಖ್ಯಸ್ಥ ನರೇಂದ್ರ ಬಾತ್ರಾಗೆ ಹರೇಂದರ್ ದೂರು ಸಲ್ಲಿಸಿದ್ದಾರೆ.
‘ಬೆಂಗಳೂರು ಸಾಯ್ ಕೇಂದ್ರದಲ್ಲಿ ಕಳಪೆ ಆಹಾರ ಪೂರೈಸಲಾಗುತ್ತಿದೆ. ಅಡುಗೆ ಕೋಣೆಯಲ್ಲಿ ಶುಚಿತ್ವ ಎಂಬುದು ಮಾಯಾವಾಗಿದೆ. ಅನಾರೋಗ್ಯಕರ ವಾತಾವರಣದಲ್ಲಿ ಅಡುಗೆ ಸಿದ್ಧಪಡಿಸಲಾಗುತ್ತಿದೆ. ಕ್ರೀಡಾಪಟುಗಳಿಗೆ ನೀಡುವ ಆಹಾರದಲ್ಲಿ ಎಣ್ಣೆ, ಕೊಬ್ಬಿನಾಂಶ ಅಧಿಕವಾಗಿದೆ. ಮಾಂಸಕ್ಕಿಂತ ಮೂಳೆಯೇ ಹೆಚ್ಚಾಗಿದೆ. ಇದಲ್ಲದೇ ಹುಳು, ಕೂದಲು ಊಟದಲ್ಲಿ ಸಾಮಾನ್ಯವಾಗಿ ಬಿಟ್ಟಿದೆ’ ಎಂದು ಆರೋಪಿಸಿದ್ದಾರೆ.
‘ಕಳೆದ ಬಾರಿ ಕೇಂದ್ರ ಕ್ರೀಡಾ ಸಚಿವರು ಆಗಮಿಸಿದ ಸಂದರ್ಭದಲ್ಲಿ ಈ ಅಂಶಗಳು ಅವರ ಗಮನಕ್ಕೂ ಬಂದಿದ್ದವು. ಇದನ್ನು ಸರಿಪಡಿಸುವಂತೆ ಸೂಚಿಸಿದ್ದರು. ಆದಾಗ್ಯೂ ಸಮಸ್ಯೆ ಬಗೆ ಹರಿದಿಲ್ಲ. ಇತ್ತೀಚೆಗೆ 48 ಅಥ್ಲೀಟ್‌ಗಳ ರಕ್ತ ಪರೀಕ್ಷೆ ನಡೆಸಲಾಯಿತು. ಇದರಲ್ಲಿ ಬಹುತೇಕ ಕ್ರೀಡಾಪಟುಗಳಲ್ಲಿ ಆಹಾರಕ್ಕೆ ಸಂಬಂಧಿಸಿದ ತೊಂದರೆ ಹೆಚ್ಚಾಗಿ ಕಂಡುಬಂದಿದೆ’ ಎಂದಿದ್ದಾರೆ. ಈ ಅಂಶಗಳನ್ನು ಕ್ರೀಡಾ ಸಚಿವರ ಗಮನಕ್ಕೆ ತಂದಿದ್ದು, ಶೀಘ್ರ ಕ್ರಮ ಕೈಗೊಳ್ಳಲಾಗುವುದು ಎಂದು ನರೇಂದ್ರ ಬಾತ್ರಾ ಪ್ರತಿಕ್ರಿಯಿಸಿದ್ದಾರೆ.