ಬೆಂಗಳೂರು(ಮಾ.28): ಲೋಕಸಭಾ ಚುನಾವಣಾ ಕಣ ರಂಗೇರುತ್ತಿದೆ. ರಾಜ್ಯದಲ್ಲಿ ಕಾಂಗ್ರೆಸ್ ಹಾಗೂ ಜೆಡಿಎಸ್ ಮೈತ್ತಿ ಸರ್ಕಾರ ಅಭ್ಯರ್ಥಿಗಳನ್ನು ಕಣಕ್ಕಿಳಿಸಿ ಪ್ರಚಾರ ಆರಂಭಿಸಿದೆ. ತಮ್ಮ ಅಭ್ಯರ್ಥಿಗಳನ್ನ ಗೆಲ್ಲಿಸಲು ರಣತಂತ್ರ ರೂಪಿಸುತ್ತಿದ್ದಾರೆ. ಮಾಜಿ ಮುಖ್ಯಮಂತ್ರಿ ಸಿದ್ದರಾಮಯ್ಯ ಮಾಸ್ಟರ್ ಪ್ಲಾನ್ ರೆಡಿಮಾಡುವಲ್ಲಿ ಬ್ಯೂಸಿಯಾಗಿದ್ದಾರೆ.ಇನ್ನು ಕರ್ನಾಟಕದ ಹಲವೆಡೆ ಐಟಿ ದಾಳಿ ನಡೆದು ಹೈಡ್ರಾಮವೇ ನಡೆದಿದೆ. ಮೈತ್ರಿ ಪಕ್ಷ ಐಟಿ ದಾಳಿಯಿಂದ ಚಿಂತೆಗೀಡಾಗಿದೆ. ಇದರ ನಡುವೆ ಸಿದ್ದರಾಮಯ್ಯ ಫುಲ್ ರಿಲಾಕ್ಸ್ ಮೂಡ್‌ಗೆ ಜಾರಿದ್ದಾರೆ.

ಇದನ್ನೂ ಓದಿ: ಮತ್ತೆ ಬ್ಯಾಟ್ ಹಿಡಿದು ಘರ್ಜಿಸಿದ ಸೌರವ್ ಗಂಗೂಲಿ!

ಬೆಂಗಳೂರಿನ ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿ ನಡೆಯುತ್ತಿರುವ ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಡಿಯನ್ಸ್ ನಡುವಿನ ಪಂದ್ಯಕ್ಕೆ ಸಿದ್ದರಾಮಯ್ಯ ಹಾಜರಾಗಿದ್ದಾರೆ. ಚಿನ್ನಸ್ವಾಮಿ ಕ್ರೀಡಾಂಗಣದಲ್ಲಿನ ನಡೆದ ಹಲವು ಕ್ರಿಕೆಟ್ ಪಂದ್ಯಗಳಿಗೆ  ಸಿದ್ದರಾಮಯ್ಯ ಹಾಜರಾಗಿದ್ದಾರೆ.

ಇದನ್ನೂ ಓದಿ: ಬೆಂಗಳೂರಿನಲ್ಲಿ ಗಲ್ಲಿ ಕ್ರಿಕೆಟ್ ಆಡಿದ ಪೀಟರ್ಸನ್!

ರಾಯಲ್ ಚಾಲೆಂಜರ್ಸ್ ಬೆಂಗಳೂರು ಹಾಗೂ ಮುಂಬೈ ಇಂಡಿಯನ್ಸ್ ನಡುವಿನ ಇಂದಿನ(ಮಾ.28) ಪಂದ್ಯ ತೀವ್ರ ಕುತೂಹಲ ಕೆರಳಿಸಿದೆ. ಮೊದಲ ಪಂದ್ಯದಲ್ಲಿ RCB ಹಾಗು ಮುಂಬೈ ಮುಗ್ಗರಿಸಿತ್ತು. ಹೀಗಾಗಿ ಗೆಲುವಿಗಾಗಿ ಜಿದ್ದಾಜಿದ್ದಿನ ಹೋರಾಟ ನಡೆಯುತ್ತಿದೆ.