ಮುಂಬೈ(ಮಾ.15): ವಿಶ್ವಕಪ್ ಟೂರ್ನಿಗೆ ತಂಡ ಆಯ್ಕೆ ಮಾಡಲು ಬಿಸಿಸಿಐ ಆಯ್ಕೆ ಸಮಿತಿ ಅಂತಿಮ ಕಸರತ್ತು ನಡೆಸುತ್ತಿದೆ. ನಾಯಕ ವಿರಾಟ್ ಕೊಹ್ಲಿ ಈಗಾಗಲೇ ವಿಶ್ವಕಪ್ ತಂಡದ ಕುರಿತು ಕೆಲ ಸೂಚನೆಗಳನ್ನೂ ನೀಡಿದ್ದಾರೆ. ಇದರ ಬೆನ್ನಲ್ಲೇ ಮಾಜಿ ನಾಯಕ ಅನಿಲ್ ಕುಂಬ್ಳೆ 2019ರ ವಿಶ್ವಕಪ್ ಟೂರ್ನಿಗೆ ಟೀಂ ಇಂಡಿಯಾ ಪ್ರಕಟಿಸಿದ್ದಾರೆ.

ಇದನ್ನೂ ಓದಿ: ವಿಶ್ವಕಪ್ 2019: ಟೀಂ ಇಂಡಿಯಾ ಪ್ರಕಟಿಸಿದ VVS ಲಕ್ಷ್ಮಣ್!

ದಿಗ್ಗಜ ಸ್ಪಿನ್ನರ್ ಕುಂಬ್ಳೆ ತಂಡದಲ್ಲಿ ಕುಲ್ದೀಪ್ ಯಾದವ್ ಹಾಗೂ ಯಜುವೇಂದ್ರ ಚಹಾಲ್‌ಗೆ ಸ್ಪಿನ್ ಜವಾಬ್ದಾರಿ ನೀಡಿದ್ದಾರೆ. ಇನ್ನು ವೇಗಿಗಳಾಗಿ ಜಸ್ಪ್ರೀತ್ ಬುಮ್ರಾ, ಭುವನೇಶ್ವರ್ ಕುಮಾರ್ ಹಾಗೂ ಮೊಹಮ್ಮದ್ ಶಮಿ ಕಾಣಿಸಿಕೊಂಡಿದ್ದಾರೆ. ಇನ್ನು ಅಂಬಾಟಿ ರಾಯುಡುಗೆ ಅಕಾಶ ನೀಡಿಲ್ಲ.

ಇದನ್ನೂ ಓದಿ: ಏಕದಿನಕ್ಕೆ ವಿದಾಯ ಘೋಷಿಸಿದ ಸೌತ್ಆಫ್ರಿಕಾ ಸ್ಟಾರ್ ಆಲ್ರೌಂಡರ್!

ಅನಿಲ್ ಕುಂಬ್ಳೆ ಪ್ರಕಟಿಸಿದ ಟೀಂ ಇಂಡಿಯಾ:
ರೋಹಿತ್ ಶರ್ಮಾ, ಶಿಖರ್ ಧವನ್, ವಿರಾಟ್ ಕೊಹ್ಲಿ(ನಾಯಕ), ಎಂ.ಎಸ್.ಧೋನಿ, ಕೇದಾರ್ ಜಾಧವ್, ಹಾರ್ಧಿಕ್ ಪಾಂಡ್ಯ, ಭುವನೇಶ್ವರ್ ಕುಮಾರ್, ಕುಲ್ದೀಪ್ ಯಾದವ್, ಯಜುವೇಂದ್ರ ಚಹಾಲ್, ಜಸ್ಪ್ರೀತ್ ಬುಮ್ರಾ, ಮೊಹಮ್ಮದ್ ಶಮಿ.