ಚೆನ್ನೈ(ಜು.29): ತಮಿಳುನಾಡು ಫುಟ್ಬಾಲ್ ತಂಡದ ಮಾಜಿ ನಾಯಕ ಕಾಲಿಯಾ ಕುಲೊತುಂಗನ್ ರಸ್ತೆ ಅಪಘಾತದಲ್ಲಿ ಸಾವನ್ನಪ್ಪಿದ್ದಾರೆ ಎಂದು ಅವರ ಕುಟುಂಬದ ಮೂಲಗಳು ಶನಿವಾರ ತಿಳಿಸಿವೆ. ಸಂತೋಷ್ ಟ್ರೋಫಿ ಟೂರ್ನಿಯಲ್ಲಿ ತಮಿಳುನಾಡು ತಂಡದ ಪರ ಆಡಿದ್ದ ಕಾಲಿಯಾ, ದೇಶಿಯ ಲೀಗ್ ಟೂರ್ನಿಗಳಲ್ಲಿ ಮುಂಬೈ ಎಫ್‌ಸಿ ಮತ್ತು ಈಸ್ಟ್ ಬೆಂಗಾಲ್ ತಂಡದ ಪರ ಆಡಿದ್ದರು.

ಕಾಲಿಯಾ ಅವರ ಅಕಾಲಿಕ ಮರಣಕ್ಕೆ, ಭಾರತ ಫುಟ್ಬಾಲ್ ತಂಡದ ನಾಯಕ ಸುನಿಲ್ ಚೆಟ್ರಿ, ಮಾಜಿ ನಾಯಕ ಐಎಮ್ ವಿಜಯನ್, ಬೈಚುಂಗ್ ಭುಟಿಯಾ ಸೇರಿದಂತೆ ಹಲವು ಆಟಗಾರರು ಸಾಮಾಜಿಕ ಜಾಲತಾಣದಲ್ಲಿ ಸಂತಾಪ ಸೂಚಿಸಿದ್ದಾರೆ. 

 

 

2003ರಲ್ಲಿ ಈಸ್ಟ್ ಬೆಂಗಾಲ್ ತಂಡದ ಪರ ಮಿಂಚಿನ ಪ್ರದರ್ಶನ ನೀಡಿದ ಕಾಲಿಯಾ, ಏಷ್ಯನ್ ಚಾಂಪಿಯನ್ಸ್ ಟ್ರೋಪಿ ಗೆಲುವಿನಲ್ಲಿ ಪ್ರಮುಖ ಪಾತ್ರ ನಿರ್ವಹಿಸಿದ್ದರು. ತಮಿಳುನಾಡಿನ ತಂಜಾವೂರಿನಲ್ಲಿ ಹುಟ್ಟಿದ ಕಾಲಿಯಾ, 40ನೇ ವಯಸ್ಸಿನಲ್ಲಿ ರಸ್ತೆ ಅಪಘಾತದಲ್ಲಿ ದುರ್ಮರಣಕ್ಕೀಡಾಗಿದ್ದಾರೆ.