ಚೆನ್ನೈ[ಸೆ.01]: ಭಾರತದ ಮಾಜಿ ಕ್ರಿಕೆಟಿಗ ಸುಬ್ರಮಣಿಯನ್ ಬದರೀನಾಥ್, ಶುಕ್ರವಾರ ಎಲ್ಲ ಮಾದರಿಯ ಕ್ರಿಕೆಟ್‌ಗೆ ನಿವೃತ್ತಿ ಘೋಷಿಸಿದ್ದಾರೆ. 38 ವರ್ಷದ ತಮಿಳುನಾಡಿನ ಮಧ್ಯಮ ಕ್ರಮಾಂಕದ ಬ್ಯಾಟ್ಸ್‌ಮನ್ ಬದರಿನಾಥ್ ಭಾರತ ಪರ 2 ಟೆಸ್ಟ್, 7 ಏಕದಿನ ಮತ್ತು ಒಂದು ಟಿ20 ಪಂದ್ಯಗಳನ್ನಾಡಿದ್ದಾರೆ. 

ಕುಟುಂಬದೊಂದಿಗೆ ಹೆಚ್ಚಿನ ಸಮಯ ಕಳೆಯುವ ಉದ್ದೇಶದಿಂದ ವೃತ್ತಿ ಜೀವನಕ್ಕೆ ವಿದಾಯ ಹೇಳುತ್ತಿರುವುದಾಗಿ ಬದರೀನಾಥ್ ಹೇಳಿದ್ದಾರೆ. ಪ್ರಥಮ ದರ್ಜೆ ಕ್ರಿಕೆಟ್‌ನಲ್ಲಿ ಬದರಿನಾಥ್, 145 ಪಂದ್ಯಗಳಿಂದ 54.49 ಬ್ಯಾಟಿಂಗ್ ಸರಾಸರಿಯಲ್ಲಿ 10,245 ರನ್ ಗಳಿಸಿದ್ದಾರೆ. ಇದರಲ್ಲಿ 32 ಶತಕಗಳು ಸೇರಿವೆ. 

ಐಪಿಎಲ್’ನಲ್ಲಿ ಚೆನ್ನೈ ಸೂಪರ್’ಕಿಂಗ್ಸ್ ಅದ್ಭುತ ಪ್ರದರ್ಶನ ತೋರಿದ್ದ ಬದರಿನಾಥ್ 2008ರಿಂದ 2013ರವರೆಗೆ 1667 ರನ್ ಬಾರಿಸಿದ್ದರು.